ETV Bharat / state

ಬಿಜೆಪಿಯವರು ತಮ್ಮ ಮನೆಯ ಹುಳಕು ಮುಚ್ಚಿಕೊಳ್ಳಲು ರಾಜಕೀಯ ಬೆರೆಸುತ್ತಿದ್ದಾರೆ: ಕೃಷ್ಣ ಬೈರೇಗೌಡ

author img

By

Published : Aug 1, 2023, 7:32 AM IST

ಅತಿವೃಷ್ಟಿ ವಿಚಾರದಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ.

ಸಚಿವ ಕೃಷ್ಣ ಬೈರೆಗೌಡ
ಸಚಿವ ಕೃಷ್ಣ ಬೈರೆಗೌಡ

ಕಲಬುರಗಿ: ಬಿಜೆಪಿಯವರು ತಮ್ಮ ಮನೆಯ ಹುಳಕನ್ನು ಮುಚ್ಚಿಕೊಳ್ಳಲು ರಾಜಕೀಯ ಬೆರೆಸುತ್ತಿದ್ದಾರೆ. ಬಿಜೆಪಿಯವರು ಸಂಪೂರ್ಣ ಹತಾಶರಾಗಿದ್ದಾರೆ. ನಮ್ಮ ಸರ್ಕಾರ ಜನರ ನಾಡಿ ಮಿಡಿತ ಅರಿತು ಕೆಲಸ ಮಾಡುತ್ತಿದೆ. ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ತಮ್ಮ ಮನೆಯಲ್ಲಿನ ಹುಳುಕನ್ನು ಸರಿಪಡಿಸಿಕೊಳ್ಳಲಾಗದೇ ರಾಜಕೀಯ ಬೆರೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿ ವಿಚಾರದಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಟೀಕೆಗೆ ಪ್ರತಿಕ್ರಿಯಿಸಿ, ನಮ್ಮ ಸರ್ಕಾರ ಜನಪರವಾಗಿ ಕಾರ್ಯನಿರ್ವಹಿಸುತ್ತಿದೆ. ಆದಾಗ್ಯೂ, ಬಿಜೆಪಿ ತನ್ನ ವೈಫಲ್ಯಗಳನ್ನು ಮರೆಮಾಚಿಕೊಳ್ಳಲು ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಎರಡೂವರೆ ತಿಂಗಳಾದರೂ ಸಹ ವಿಧಾನಸಭೆ ಹಾಗೂ ವಿಧಾನ ಪರಿಷತ್‍ನಲ್ಲಿ ಬಿಜೆಪಿಯು ವಿರೋಧ ಪಕ್ಷದ ನಾಯಕನಿಗೆ ಆಯ್ಕೆ ಮಾಡಲು ಆಗಿಲ್ಲ. ಅವರ ಮನೆಯ ಹುಳುಕು ಮುಚ್ಚಿಕೊಳ್ಳಲು ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರತಿ ಪಕ್ಷದ ನಾಯಕ ಯಾರು ಎಂಬುದು ಜನ ಕೇಳುವುದಕ್ಕೆ ಮುಂದಾಗಿದ್ದಾರೆ. ಬಜೆಟ್ ಪಾಸ್ ಆದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ ಎಂದು ಅವರು ಲೇವಡಿ ಮಾಡಿದರು.

ಇಡೀ ಭಾರತದಲ್ಲಿಯೇ ಕರ್ನಾಟಕ ವಿಧಾನಮಂಡಲಕ್ಕೆ ಒಂದು ಒಳ್ಳೆಯ ಹೆಸರು ಇದೆ. ಆದಾಗ್ಯೂ, ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಹಾಗೂ ರಾಜ್ಯಪಾಲರು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ಮಾಡುವುದಕ್ಕೂ ಸಹ ಉಭಯ ಸದನಗಳಲ್ಲಿ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗದ ಬಿಜೆಪಿ ಅಯೋಗ್ಯವಾಗಿದೆ. ಮೊದಲು ತನ್ನ ಹುಳುಕು ಸರಿಪಡಿಸಿಕೊಳ್ಳಲಿ ಎಂದು ಕಿಡಿ ಕಾರಿದರು.

ಹೊಸ ತಾಲೂಕುಗಳಿಗೆ ಹಂತ -ಹಂತವಾಗಿ ಮೂಲಸೌಕರ್ಯ: ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ 63 ತಾಲೂಕುಗಳಲ್ಲಿ ತಾಲೂಕು ಮಟ್ಟದ ಕಚೇರಿ ಪೈಕಿ 20 ತಾಲೂಕುಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿದ್ದು, ಉಳಿದ ತಾಲೂಕುಗಳಲ್ಲಿ ಹಂತ - ಹಂತವಾಗಿ ಮೂಲಸೌಕರ್ಯ ಕಲ್ಪಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸೋಮವಾರ ಕಲಬುರಗಿಯಲ್ಲಿ ಪ್ರಗತಿ ಪರಿಶೀಲನೆಯಲ್ಲಿ ಇತ್ತೀಚಿನ ನೆರೆ ಹಾವಳಿ ಸೇರಿದಂತೆ ಕಂದಾಯ ಇಲಾಖೆಯ ಎಲ್ಲ ಕಾರ್ಯಕ್ರಮಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ್ದೇನೆ. ಹೊಸ ಸರ್ಕಾರದ ಆಶಯಕ್ಕೆ ಅನುಗುಣವಾಗಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜನರಿಗೆ ತ್ವರಿತವಾಗಿ ನ್ಯಾಯ ಒದಗಿಸಲು ಅಧಿಕಾರಿಗಳು ಸಹ ಇರುವ ವ್ಯವಸ್ಥೆಯಲ್ಲಿ ಮತ್ತಷ್ಟು ಸರಳೀಕರಣಕ್ಕೆ ಸಲಹೆ ನೀಡಿದ್ದಾರೆ ಎಂದರು.

ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ 141 ಕೋಟಿ ರೂ. ಬಿಡುಗಡೆ: ನೆರೆ ಹಾವಳಿ ಪರಿಹಾರಕ್ಕೆ ಎಂದೇ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಗೆ 141 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇನ್ನು ಧೀರ್ಘಾವಧಿ ಯೋಜನೆಗಳ ಸಾಕಾರಕ್ಕೆ 39 ಕೋಟಿ ರೂ. ಹಾಗೂ ಇನ್ನಿತರ ಕೆಲಸಗಳಿಗೆ 13 ಕೋಟಿ ರೂ. ಅನುದಾನ ಒದಗಿಸಲಾಗಿದೆ. ನೆರೆ ಹಾವಳಿ ಪರಿಹಾರ ಮತ್ತು ಮಳೆ ಹಾನಿಯಿಂದ ತ್ವರಿತ ರೀತಿಯಲ್ಲಿ ಕೆಲಸ ನಿರ್ವಹಿಸಲು ಯಾವುದೇ ಅನುದಾನ ಕೊರತೆಯಿಲ್ಲ. ಅವಶ್ಯಕತೆ ಇದ್ದಲ್ಲಿ ಇನ್ನೂ ಅನುದಾನ ನಿಡಲಾಗುವುದು ಎಂದರು.

3 ಕಾಯ್ದೆಗೆ ತಿದ್ದುಪಡಿ: ಕಂದಾಯ ವ್ಯವಸ್ಥೆಯಲ್ಲಿ ಮತ್ತಷ್ಟು ಸರಳೀಕರಣಗೊಳಿಸಲು ಕಳೆದ ಅಧಿವೇಶನದಲ್ಲಿ ಮೂರು ಮಸೂದೆಗೆ ತಿದ್ದುಪಡಿ ತರಲಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ತಿಯನ್ನು ಸುಳ್ಳು ಮಾಹಿತಿ ನೀಡಿ, ವಂಚಿಸಿ ಅಥವಾ ಕೊಟ್ಟಿ ದಾಖಲೆ ಸೃಷ್ಟಿಸಿ ದುರಪಯೋಗದ ಮೂಲಕ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಾಯಿಸಿರುವುದು ಕಂಡು ಬದಲ್ಲಿ ಜಿಲ್ಲಾ ನೋಂದಣಾಧಿಕಾರಿಗಳು ಅಂತಹ ಪ್ರಕರಣಗಳು ಕೈಗೆತ್ತಿಕೊಂಡು 3 ತಿಂಗಳ ಒಳಗಾಗಿ ಸದರಿ ದಸ್ತಾವೇಜನ್ನು ರದ್ದುಪಡಿಸುವ ಅಧಿಕಾರ ಹಂದಿರಲಿದ್ದಾರೆ.

ಮಹಾ ಯೋಜನೆ (ಮಾಸ್ಟರ್ ಪ್ಲ್ಯಾನ್) ಅನುಮೋದಿತ ಪ್ರದೇಶದಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರ ಭೂಮಿಯಾಗಿ ಪರಿವರ್ತನೆಗೆ ಜಿಲ್ಲಾಧಿಕಾರಿಗಳ ಬಳಿ ಹೋಗದೆ ನೇರವಾಗಿ ನಗರ ಯೋಜನಾ ಕಚೇರಿ/ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ, ಪರಿವರ್ತನೆಗೆ ನಿಗದಿತ ಶುಲ್ಕ ಪಾವತಿ ಮಾಡಿ ಎನ್.ಎ. ಆಗಿ ಬದಲಾಯಿಸುವ ಹಾಗೂ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವು ಜಮೀನುಗಳ ವರ್ಗಾವಣೆ ನಿಷೇಧ) ಕಾಯ್ದೆ-1978ಕ್ಕೆ ತಿದ್ದುಪಡಿ ತಂದು ಎಸ್.ಸಿ ಎಸ್.ಟಿ ಜನಾಂಗದವರ ಹಕ್ಕು ರಕ್ಷಿಸಲಾಗಿದೆ. ಇದು ಜನಪರ ಸರ್ಕಾರದ ಜನಪರ ನಿರ್ಧಾರಗಳಾಗಿವೆ. ಇದು ಜನಪರ ಆಡಳಿತಕ್ಕೆ ಸರ್ಕಾರಕ್ಕಿರುವ ಬದ್ಧತೆ ಪ್ರದರ್ಶಿಸುತ್ತದೆ ಎಂದರು.

ಇದನ್ನೂ ಓದಿ: ಆಡಳಿತದಲ್ಲಿ ತಂತ್ರಜ್ಞಾನ.. ಆಗಸ್ಟ್ 15 ರಿಂದ ಇ ಆಫೀಸ್​ ಮೂಲಕವೇ ಪತ್ರ ವ್ಯವಹಾರ : ಸಚಿವ ಕೃಷ್ಣ ಬೈರೇಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.