ಕಲಬುರಗಿ: ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಬಾಯ್ತಪ್ಪಿ ಹೇಳಿಕೆ ನೀಡಿದ್ದರೆ ಕ್ಷಮೆಯಾಚಿಸಲಿ. ಇಲ್ಲಾಂದ್ರೆ ಮೋದಿ ಚಿಲ್ಲರೆ ಎಂಬುದರ ಬಗ್ಗೆ ವಿವರಣೆ ಕೊಡಲಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಚಿಲ್ಲರೆ ಇದ್ದಾರೆ ಅವರ ಮಾತಿಗೆ ಬೆಲೆ ಕೊಡಬೇಡಿ ಎಂಬ ಖರ್ಗೆ ಅವರ ಹೇಳಿಕೆಯನ್ನ ಖಂಡಿಸಿದ್ದಾರೆ. ಖರ್ಗೆ ಅವರ ಮೇಲೆ ತುಂಬಾ ಗೌರವ ಇದೆ. ಮೋದಿ ವಿರುದ್ಧ ಖರ್ಗೆ ಮಾತಾಡಿರೋದು ನನಗೆ ಅತ್ಯಂತ ನೋವಾಗಿದೆ. ನನ್ನ ರಾಜಕೀಯ ಜೀವನದಲ್ಲಿ ಎಂದು ಸಹ ಇಷ್ಟು ಬೇಸರವಾಗಿರಲಿಲ್ಲ ಎಂದಿದ್ದಾರೆ.
ಆದರೆ ವಿಶ್ವವೇ ಮೆಚ್ಚಿದ ನಾಯಕನ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹಾಗೇ ಮಾತಾಡಬಾರದಿತ್ತು. ಖರ್ಗೆಯವರ ಮಾತು ಅವರಿಗೆ ಸರಿಯನಿಸಿದ್ರೆ ನಾ ಏನು ಹೇಳುವುದಿಲ್ಲ. ಖರ್ಗೆ ಅವರು ಕ್ಷಮೆ ಕೇಳಿದ್ರೆ ಅವರ ಗೌರವ ಮತ್ತಷ್ಟು ಹೆಚ್ಚಾಗಲಿದೆ ಎಂದು ಈಶ್ವರಪ್ಪ ಹೇಳಿದ್ರು.
ದೇಶದಲ್ಲಿ ಕಾಂಗ್ರೆಸ್ ಪಕ್ಷ ಪೀಸ್ ಪೀಸ್
ಬಿಜೆಪಿಯ ಎಮ್‌ಎಲ್‌ಎಗಳು ಸಿಂಹ ಇದ್ದಹಾಗೆ, ನಮ್ಮ ಶಾಸಕರು ಮಾರಾಟದ ವಸ್ತುಗಳಲ್ಲ. ಬಿಜೆಪಿಯ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಮಾತೇ ಇಲ್ಲ. 40 ಅಲ್ಲ, 4 ಜನ ಶಾಸಕರನ್ನು ಕಾಂಗ್ರೆಸ್ ಪಕ್ಷ ಸೆಳೆಯಲಿ ನೋಡೊಣ ಎಂದು ಸಚಿವ ಈಶ್ವರಪ್ಪ ಸವಾಲು ಹಾಕಿದ್ದಾರೆ.
ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಪೀಸ್ ಪೀಸ್ ಆಗಿದೆ. ಕಾಂಗ್ರೆಸ್ ಮೊದಲು ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಕೆಲಸ ಮಾಡಲಿ. ಈ ಹಿಂದೆ ಮಾಡಿದ ಕೆಲಸಗಳ ಬಗ್ಗೆ ಪಟ್ಟಿ ಕೊಡಲಿ, ನಂತರ ನಾವು ಕೊಡುತ್ತೇವೆ ಎಂದು ಗುಡುಗಿದರು.
ಇದನ್ನೂ ಓದಿ: ಸಿಂದಗಿ ಉಪಚುನಾವಣೆಗೆ ವೇದಿಕೆ ಸಿದ್ದ: ಮೂರು ಪಕ್ಷಗಳಿಂದ ಭರ್ಜರಿ ಸಿದ್ಧತೆ