ಕಲಬುರಗಿ: ಟ್ಯಾಂಕರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 15 ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಸೇಡಂ ತಾಲೂಕಿನ ಮಳಖೇಡ ಸಮೀಪ ಜರುಗಿದೆ.
ಕಲಬುರಗಿಯಿಂದ ಸೇಡಂನತ್ತ ತೆರಳುತ್ತಿದ್ದ ಟ್ಯಾಂಕರ್ಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಹಲವರಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಳಖೇಡ ಪಿಎಸ್ಐ ಶಿವಶಂಕರ ಸಾಹು ತಿಳಿಸಿದ್ದಾರೆ.
ಘಟನೆ ನಡೆದ ತಕ್ಷಣ ಆಂಬ್ಯುಲೆನ್ಸ್ ಮೂಲಕ ಸೇಡಂ ಆಸ್ಪತ್ರೆಗೆ ಗಾಯಗೊಂಡವರನ್ನು ರವಾನಿಸಿ, ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.