ಕಲಬುರಗಿ: ಸಾರಿಗೆ ಬಸ್ ಚಾಲಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದ ಘಟನೆ ಅಫಜಲಪೂರ ತಾಲೂಕಿನ ಸಿದನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಶಿವಶರಣಪ್ಪ (40) ಕೊಲೆಯಾಗಿರುವ ಚಾಲಕ. ಶಿವಶರಣಪ್ಪ ಸಿದನೂರ ಗ್ರಾಮದ ನಿವಾಸಿಯಾಗಿದ್ದು, ಕೆಎಸ್ಆರ್‌ಟಿಸಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಹೋಗಿದ್ದ ಶಿವಶರಣಪ್ಪ, ಕಳೆದ ರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ.
ಇದನ್ನೂ ಓದಿ: ಹಬ್ಬದ ಸಂಭ್ರಮದಲ್ಲೇ ಪತ್ನಿಯ ಕತ್ತು ಸೀಳಿದ ವೃದ್ಧ: 50 ವರ್ಷಗಳ ಸಂಸಾರ ದುರಂತ ಅಂತ್ಯ!
ಸಿದನೂರ ಗ್ರಾಮದ ಹೊರವಲಯದ ಕಾನೆಲ್ ಬಳಿ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ರೇವೂರ ಬಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ: ಕಲಬುರಗಿಯಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ!