ಕಲಬುರಗಿ: ಜಿಲ್ಲೆಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಲಾಯಿತು.
ಜಿಲ್ಲೆಯ ವಿಶ್ವವಿದ್ಯಾಲಯದಲ್ಲಿ ಫೆ.5, 6 ಮತ್ತು 7 ರಂದು ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಾಡಾಗಿದೆ. ಈ ಭಾಗದ ಕಲೆ, ಸಂಸ್ಕೃತಿ, ಇತಿಹಾಸ, ಶಾಸನಗಳು, ಐತಿಹಾಸಿಕ ತಾಣಗಳು, ಕವಿರಾಜಮಾರ್ಗ ಕೃತಿಯ ಚಿತ್ರಣ ಆಕರ್ಷಕ ಲಾಂಛನದಲ್ಲಿದೆ.
ಕಾರ್ಯಕ್ರಮದಲ್ಲಿ ಶಾಸಕರು, ಸಾಹಿತ್ಯ ಸಮ್ಮೇಳನದ ವಿವಿಧ ಸಮಿತಿ ಸದಸ್ಯರು, ಅಧಿಕಾರಿಗಳು, ಕಸಾಪ ಅಧ್ಯಕ್ಷರು ಉಪಸ್ಥಿತರಿದ್ದರು.