ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ಆದರೆ, ಕಾನೂನು ವಿದ್ಯಾರ್ಥಿಗಳು ಆಫ್ಲೈನ್ ಪರೀಕ್ಷೆ ನಡೆಸದಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟಿಸಿದರು.
ಲಾಕ್ಡೌನ್ನಿಂದಾಗಿ ವಿವಿ ಆನ್‍ಲೈನ್ ತರಗತಿಗಳನ್ನು ನಡೆಸಿದೆ. ಕಳೆದ ಬಾರಿ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಆನ್‍ಲೈನ್ ಮೂಲಕ ನಡೆಸಿದೆ. ಆದರೀಗ ವಿವಿ ಏಕಾಏಕಿ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯನ್ನು ಆಫ್ಲೈನ್ ಮೂಲಕ ನಡೆಸಲು ಮುಂದಾಗಿದೆ. ವಿವಿಯ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಆನ್‍ಲೈನ್ ಮೂಲಕ ಪರೀಕ್ಷೆ ನಡೆಸಬೇಕು. ಬೇಡಿಕೆಗೆ ಸ್ಪಂದಿಸದಿದ್ದರೆ ಪರೀಕ್ಷೆಯನ್ನು ಬಹಿಷ್ಕರಿಸಿ ಹೋರಾಟ ಮುಂದುವರೆಸುವ ಎಚ್ಚರಿಕೆ ನೀಡಿದರು. ಇದೇ ವೇಳೆ, ಜಿಲ್ಲಾಡಳಿತದ ಮೂಲಕ ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ರಾಜ್ಯದಲ್ಲಿಂದು 373 ಮಂದಿಗೆ ಕೋವಿಡ್ ದೃಢ; ನಾಲ್ವರು ಸೋಂಕಿತರು ಸಾವು