ಕಲಬುರಗಿ : ಅವಿರೋಧವಾಗಿ ಆಯ್ಕೆಯಾಗುವ ಗ್ರಾಮ ಪಂಚಾಯತ್‌ಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಕೆಕೆಆರ್ಡಿಬಿಯಿಂದ ನೀಡಲಾಗುವುದು ಎಂದು ದತ್ತಾತ್ರೇಯ ಪಾಟೀಲ್ ರೇವೂರು ಹೇಳಿಕೆ ಹಿನ್ನೆಲೆ ಅಗತ್ಯ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಅಧೀನ ಕಾರ್ಯದರ್ಶಿ ಅವರು ಕಲಬುರಗಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆಗೆ ಆಮಿಷ ಒಡ್ಡಿದ ಆರೋಪದಡಿ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಾಗಿ ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ್ ಹಾಗೂ ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಕ್ರಮಕ್ಕೆ ಸೂಚಿಸಲಾಗಿದೆ.
ಇದನ್ನೂ ಓದಿ: ಬಳೂರ್ಗಿ ಗ್ರಾಪಂ ಚುನಾವಣೆ.. ಅಖಾಡದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಪತಿ-ಪತ್ನಿ
ಚುನಾವಣಾ ಆಯೋಗದ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸ್ವಾಗತ : ಚುನಾವಣಾ ಆಯೋಗದ ಕ್ರಮವನ್ನು ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸ್ವಾಗತಿಸಿದ್ದಾರೆ. ಕೆಕೆಆರ್ಡಿಬಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ್ ರೇವೂರು ಅವರು ಅವಿರೋಧ ಆಯ್ಕೆಯಾಗುವ ಪಂಚಾಯತ್‌ಗೆ ವಿಶೇಷ ಅನುದಾನ ನೀಡುವುದಾಗಿ ಅಭ್ಯರ್ಥಿಗಳಿಗೆ ಆಮಿಷ ಒಡ್ಡುವ ಮೂಲಕ ಚುನಾವಣಾ ಆಯೋಗ ಜಾರಿಗೆ ತಂದ ನೀತಿ ಸಂಹಿತೆ ಉಲ್ಲಂಘಿಸಿದ್ದರು. ಈ ಹಿನ್ನೆಲೆಯಲ್ಲಿ ದೂರು ಸಲ್ಲಿಸಲಾಗಿತ್ತು. ಈಗ ಚುನಾವಣಾ ಆಯೋಗ ಜಿಲ್ಲಾಧಿಕಾರಿಗೆ ಪತ್ರ ಬರೆದಿರುವುದು ಸ್ವಾಗತಾರ್ಹ ಕ್ರಮ ಎಂದು ಹೇಳಿದ್ದಾರೆ.