ಕಲಬುರಗಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲೆಯ ವಿವಿಧ ತಾಲೂಕಿಗಳಲ್ಲಿನ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಕಲಬುರಗಿ ಗ್ರಾಮ ಪಂಚಾಯತ್ನಲ್ಲಿ ಖಾಲಿ ಇರುವ 45 ಹುದ್ದೆಗಳ ವಿವರ ಇಂತಿದೆ.
- ಅಫಜಪುರ ತಾಲೂಕು 6
- ಆಳಂದ ತಾಲೂಕು 5
- ಶಹಾಬಾದ್ ತಾಲೂಕು 1
- ಚಿಂಚೋಳಿ ತಾಲೂಕು 4
- ಕಲಬುರಗಿ ತಾಲೂಕು 5
- ಜೇವರ್ಗಿ ತಾಲೂಕು 4
- ಯಡ್ರಾಮಿ ತಾಲೂಕು 4
- ಸೇಡಂ ತಾಲೂಕು 4
- ಕಮಲಾಪೂರ ತಾಲೂಕು 4
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು. ಕನಿಷ್ಟ ಮೂರು ತಿಂಗಳ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು.
ವಿಶೇಷ ಸೂಚನೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿ ಸಡಿಲಿಕೆ ನಡೆಸಲಾಗುವುದು.
ನೇಮಕಾತಿ: ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಅಭ್ಯರ್ಥಿಗಳ ನೇಮಕ ನಡೆಸಲಾಗುವುದು.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು 40 ರೂ ಅರ್ಜಿ ಪಾವತಿ ಮಾಡಿ ಅರ್ಜಿ ನಮೂನೆ ಪಡೆದು ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸದಲ್ಲಿ ಪಡೆಯಬಹುದು.
ನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ, ರೂಮ್ ನಂಬರ್ 26, ಮಿನಿ ವಿಧಾನಸೌಧ, ಕಲಬುರಗಿ ಕಚೇರಿ.
ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವೇತನ: ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15,196 ರೂ ವೇತನ ನಿಗದಿಸಲಾಗಿದೆ.
ಈ ಹುದ್ದೆಗೆ ಅಭ್ಯರ್ಥಿಗಳು ಸೆಪ್ಟೆಂಬರ್ 25ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 13 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ kalaburagi.nic.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಡಿಸಿಸಿ ಬ್ಯಾಂಕ್ನಲ್ಲಿ ಎಫ್ಡಿಎ, ಎಸ್ಡಿಎ ನೇಮಕಾತಿ; 68 ಹುದ್ದೆಗಳಿಗೆ ಅರ್ಜಿ ಆಹ್ವಾನ