ETV Bharat / state

ಲಿಂಗಾಯತರು ಕೇವಲ ಬಿಜೆಪಿ ಸ್ವತ್ತಲ್ಲ: ಡಿ.ಕೆ ಶಿವಕುಮಾರ್ ಖಡಕ್​ ಮಾತು - DKS KPCC President

ಲಿಂಗಾಯತ ನಾಯಕರು ಕಾಂಗ್ರೆಸ್​ ಪಕ್ಷಕ್ಕೆ ಬರಲು ಸಿದ್ಧರಿದ್ದು, ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳುವ ವಿಚಾರವಾಗಿ ಎಂ.ಬಿ ಪಾಟೀಲ್, ಎಸ್.ಆರ್ ಪಾಟೀಲ್, ಈಶ್ವರ್ ಖಂಡ್ರೆ ಚರ್ಚೆ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

DK Sivakumar
ಡಿ.ಕೆ ಶಿವಕುಮಾರ್
author img

By

Published : Jul 17, 2021, 12:34 PM IST

ಕಲಬುರಗಿ: ಲಿಂಗಾಯತರು ಕೇವಲ ಬಿಜೆಪಿಯ ಸ್ವತ್ತಲ್ಲ, ಕಾಂಗ್ರೆಸ್​ನಲ್ಲಿಯೂ ಲಿಂಗಾಯತರಿದ್ದಾರೆ. ಅನೇಕ ಜನ ಲಿಂಗಾಯತ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಡಿಕೆಶಿ, ಲಿಂಗಾಯತ ನಾಯಕರು ಪಕ್ಷಕ್ಕೆ ಬರಲು ಸಿದ್ಧರಿದ್ದು, ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳುವ ವಿಚಾರವಾಗಿ ಎಂ.ಬಿ ಪಾಟೀಲ್, ಎಸ್.ಆರ್ ಪಾಟೀಲ್, ಈಶ್ವರ್ ಖಂಡ್ರೆ ಚರ್ಚೆ ನಡೆಸುತ್ತಿದ್ದಾರೆ. ಲಿಂಗಾಯತರು ತಮ್ಮ ಸ್ವತ್ತು ಎನ್ನುವ ಹಾಗೆ ಬಿಜೆಪಿಯವರು ವರ್ತಿಸುತ್ತಿದ್ದಾರೆ ಎಂದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ

ಇನ್ನು ಸಿಎಂ ಸ್ಥಾನಕ್ಕೆ ಕಾಂಗ್ರೆಸ್​ನಲ್ಲಿ ಮ್ಯೂಜಿಕಲ್ ಚೇರ್ ಸ್ಪರ್ಧೆ ನಡೆಯುತ್ತಿದೆ ಅಂತ ಹೇಳಿಕೆ ನೀಡಿದ ಬಿಜೆಪಿ ಅಧ್ಯಕ್ಷ ಕಟೀಲ್​ಗೆ ತಿರುಗೇಟು ನೀಡಿದ ಡಿಕೆಶಿ, ಸಿಎಂ ಹುದ್ದೆ ಕಾದಾಟ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿಲ್ಲ. ಅದು ಬಿಜೆಪಿಯಲ್ಲಿಯೇ ನಡೆದಿದೆ. ಸದ್ಯಕ್ಕೆ ಚುನಾವಣೆ ಹತ್ತಿರವಿಲ್ಲ, ಕೊರೊನಾದಿಂದ ರಾಜಕೀಯ ಸಭೆಗಳಿಗೆ ಅವಕಾಶ ಕೊಟ್ಟಿಲ್ಲ. ಹೀಗಾಗಿ ಜನರ ಬಳಿ ಹೋಗಿ ಅವರ ಸಮಸ್ಯೆ ಆಲಿಸುತ್ತಿದ್ದೇವೆ.

ಬಂಜಾರ ಸಮಾಜ, ಕರಾವಳಿ ಮಿನುಗಾರರು ಸೇರಿದಂತೆ ಹಿಂದುಳಿದ ಸಮುದಾಯಗಳ ಬಗ್ಗೆ ಮುಂದಿನ ದಿನಗಳಲ್ಲಿ ಮಾಡಬೇಕಾದ ಅಭಿವೃದ್ಧಿ ಕಾರ್ಯವೈಖರಿ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.