ಕಲಬುರಗಿ : ನಗರ ಮತ್ತು ಜಿಲ್ಲೆಯ ಸ್ಥಳೀಯ ಸಂಸ್ಥೆಗಳು ಮಧ್ಯಾಹ್ನ 2 ಗಂಟೆ ಮೇಲೆ ಮುಚ್ಚಬೇಕೆಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಆದೇಶಿಸಿದ್ದಾರೆ.
ಕೊರೊನಾ ಸೋಂಕು ನಿಯಂತ್ರಿಸಲು ನಗರ ಮತ್ತು ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ ಜುಲೈ 20ರವರೆಗೆ ಘೋಷಿಸಲಾದ ಲಾಕ್ಡೌನ್ ಅವಧಿಯಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2ಗಂಟೆವರೆಗೆ ಮಾತ್ರ ನಿರ್ವಹಿಸಿ ಮುಚ್ಚಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಈ ಆದೇಶವು ಆಸ್ಪತ್ರೆ ಮತ್ತು ಔಷಧಿ ಅಂಗಡಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.