ಕಲಬುರಗಿ : ಕೊರೊನಾ ಹಾಟ್ಸ್ಪಾಟ್ ಆಗಿರುವ ಜಿಲ್ಲೆಯಲ್ಲಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಕಲಬುರಗಿ ನಗರದಾದ್ಯಂತ ಲಾಕ್ಡೌನ್ನ ಮತ್ತಷ್ಟು ಬಲಪಡಿಸಲಾಗ್ತಿದೆ.
ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್, ಕಬ್ಬಿಣದ ತಗಡು ಹಾಕಿ ರಸ್ತೆ ಬಂದ್ ಮಾಡಲಾಗಿದೆ. ಪೊಲೀಸರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗಿಳಿದಿದ್ದು, ಅನಾವಶ್ಯಕ ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಸೀಜ್ ಮಾಡುತ್ತಿದ್ದಾರೆ. ಜತೆಗೆ ಲಾಠಿ ರುಚಿ ತೋರಿಸುತ್ತಿದ್ದಾರೆ.
ಅನಾವಶ್ಯಕ ರಸ್ತೆಗಳಲ್ಲಿ ಓಡಾಡದಂತೆ ಪೊಲೀಸರು ಖಡಕ್ ಎಚ್ಚರಿಕೆ ನೀಡುತ್ತಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ 44 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಲ್ಲಿ ಐವರು ಮೃತಪಟ್ಟಿದ್ದಾರೆ. ಇನ್ನೂ ಸಾವಿರಕ್ಕೂ ಅಧಿಕ ಜನರ ಪರೀಕ್ಷಾ ವರದಿ ಬರುವುದು ಬಾಕಿ ಇದೆ.