ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಪಡಿತರ ಅಕ್ಕಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಕಲಬುರಗಿ ಹೊರವಲಯ ಶಹಬಾದ್ ರಸ್ತೆಯ ನಂದೂರ್ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಟೀ ಅಂಗಡಿಗೆ ಗುದ್ದಿದ ಲಾರಿ: ನಾಲ್ವರು ಸ್ಥಳದಲ್ಲೇ ಸಾವು
ಕಲಬುರಗಿಯಿಂದ ಚಿತ್ತಾಪುರಕ್ಕೆ ಮೂರು ಲಾರಿಗಳು ಪಡಿತರ ಅಕ್ಕಿಯನ್ನು ತುಂಬಿಕೊಂಡು ಹೋಗುತ್ತಿದ್ದವು. ಈ ವೇಳೆ ಒಂದು ಲಾರಿ ಎದುರಿನಿಂದ ವೇಗವಾಗಿ ಬರುತ್ತಿದ್ದ ವಾಹನವೊಂದಕ್ಕೆ ದಾರಿ ಕೊಡಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಲಾರಿಯಲ್ಲಿದ್ದ ಅಕ್ಕಿ ಮೂಟೆಗಳು ಚೆಲ್ಲಾಪಿಲ್ಲಿಯಾಗಿವೆ.
ಇದನ್ನೂ ಓದಿ: ಹಡಗು ಮಗುಚಿ ಗಂಗಾ ನದಿಯಲ್ಲಿ ಬಿದ್ದ ಲಾರಿಗಳು: ಐದಾರು ಮಂದಿ ನಾಪತ್ತೆ
ಅದೃಷ್ಟವಶಾತ್ ಲಾರಿ ಚಾಲಕ ಸೇರಿದಂತೆ ಆರು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಆರು ಜನರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ದುರ್ಘಟನೆ ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.