ETV Bharat / state

ಕಲಬುರಗಿ: ಯುವ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಯುವ ಪ್ರೇಮಿಗಳಿಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

lovers-committed-suicide-by-hanging-in-kalburgi
ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವ ಪ್ರೇಮಿಗಳ ಶವ ಪತ್ತೆ
author img

By

Published : May 8, 2023, 5:13 PM IST

ಕಲಬುರಗಿ : ಯುವ ಪ್ರೇಮಿಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕಮಲಾಪುರ್ ತಾಲೂಕಿನ ಡೊಂಗರಗಾಂವ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಅಕ್ಷತಾ ಭರಣಿ (19) ಹಾಗೂ ಪಾಂಡುರಂಗ್ ಕಿಣ್ಣಿ(20) ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ. ಯುವ ಪ್ರೇಮಿಗಳ ಸಾವಿಗೆ ಕಾರಣ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಕುಟುಂಬಸ್ಥರ ವಿರೋಧದಿಂದ ಸಾವಿಗೆ ಶರಣಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಮೃತರಿಬ್ಬರು ಕಳೆದ ಕೆಲ ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರಂತೆ. ಕಳೆದ ಶುಕ್ರವಾರ ಬೆಳಗ್ಗೆ ಮನೆಯಿಂದ ಇಬ್ಬರು ನಾಪತ್ತೆಯಾಗಿದ್ದರು. ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿತ್ತು. ಇಬ್ಬರ ಮನೆಯವರು ಸಾಕಷ್ಟು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಈ ಸಂಬಂಧ ಕಮಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದು ಪತ್ತೆಯಾದ ಶವಗಳನ್ನು ಕಂಡು ಕುರಿಗಾಹಿಗಳು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಮಲಾಪುರ್ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅಡ್ವೋಕೇಟ್ ಸಾವು : ಕಲಬುರಗಿಯ ಸೇಡಂ ರಸ್ತೆಯಲ್ಲಿನ ಗೀತಾ ನಗರ ಬಳಿ ಸಂಭವಿಸಿದ್ದ ಕಾರು ಮತ್ತು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನ್ಯಾಯವಾದಿಯೊಬ್ಬರು ಇಂದು ಮೃತಪಟ್ಟಿದ್ದಾರೆ. ಮೃತರನ್ನು ಮುಗಳಿ ಗ್ರಾಮದ ಸಿದ್ರಾಮಪ್ಪ ಎಂದು ಗುರುತಿಸಲಾಗಿದೆ.

ಕಳೆದ ಏ. 23ರಂದು ಸೇಡಂ ರಸ್ತೆಯ ಗೀತಾ ನಗರ ಹತ್ತಿರ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಬೈಕ್​ನಲ್ಲಿದ್ದ ಶ್ರೀಶೈಲ್ (6) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸತೀಶ ಎಂಬುವವರು ಗಾಯಗೊಂಡಿದ್ದರು. ಇವರು ವಚ್ಚಾ ಗ್ರಾಮಕ್ಕೆ ಹೊರಟಿದ್ದಾಗ ಘಟನೆ ನಡೆದಿತ್ತು.

ಇನ್ನು, ಕಾರಿನಲ್ಲಿದ್ದ ನ್ಯಾಯವಾದಿ ಸಿದ್ರಾಮಪ್ಪ ಸೇರಿದಂತೆ ಕೆಲವರು ಗಾಯಗೊಂಡಿದ್ದರು. ಬಳಿಕ ಸಿದ್ರಾಮಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ‌ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : 19 ಜನ ಮಾದಕ‌ ದಂಧೆಕೋರರ ಬಂಧನ : 7 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.