ಕಲಬುರಗಿ: ಗುಜರಾತ್ನಲ್ಲಿ ಸ್ಥಾಪಿಸಲಾದ ಸರ್ದಾರ್ ವಲ್ಲಭಭಾಯ್ ಪಟೇಲ್ರ ನೂರಡಿ ಎತ್ತರದ ಸ್ಟ್ಯಾಚು ಆಫ್ ಯುನಿಟಿ ಮಾದರಿಯಲ್ಲಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಿಶ್ವಗುರು ಬಸವಣ್ಣನವರ ಪ್ರತಿಮೆ ನಿರ್ಮಿಸುವಂತೆ ವೀರಶೈವ ಲಿಂಗಾಯತ ಒಕ್ಕೂಟದ ಮುಖಂಡರು ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಒಕ್ಕೂಟದ ವಿಭಾಗೀಯ ಅಧ್ಯಕ್ಷ ಡಾ. ಎ.ಎಸ್.ಭದ್ರಶೆಟ್ಟಿ, ಗುಜರಾತ್ನ ಸರ್ದಾರ್ ವಲ್ಲಭಭಾಯ್ ಪಟೇಲರ ಪ್ರತಿಮೆ ಮಾದರಿಯಲ್ಲಿ ವಿಮಾನ ನಿಲ್ದಾಣ ಅಥವಾ ಸಮಾನಾಂತರ ಸ್ಥಳದಲ್ಲಿ ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಬಸವಣ್ಣನವರ ನೂರಡಿ ಎತ್ತರದ "ಸ್ಟ್ಯಾಚು ಆಫ್ ಇಕ್ವಾಲಿಟಿ" ಪ್ರತಿಮೆ ಸ್ಥಾಪಿಸಬೇಕು.
ಅಲ್ಲದೆ ಕಲ್ಯಾಣ ನಾಡಿನ ಕೇಂದ್ರ ಸ್ಥಾನದಲ್ಲಿ ಆರಂಭವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ವಿಶ್ವಗುರು ಬಸವಣ್ಣನವರ ಹೆಸರು ನಾಮಕರಣ ಮಾಡುವಂತೆ ಒತ್ತಾಯಿಸಿದರು. ಇನ್ನು ಪ್ರತಿಮೆ ಸ್ಥಾಪನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಬಳಿ ನಿಯೋಗದೊಂದಿಗೆ ತೆರಳಿ ಮನವಿ ಸಲ್ಲಿಸುವುದಾಗಿ ಭದ್ರಶೆಟ್ಟಿ ತಿಳಿಸಿದರು.