ಕಲಬುರಗಿ: ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಅಬಕಾರಿ ಪೊಲೀಸರು, ಆತನಿಂದ ಮದ್ಯ, ಒಂದು ನಾಡ ಪಿಸ್ತೂಲ್ ಹಾಗೂ ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಆಳಂದ ತಾಲೂಕಿನ ಹಿರೋಳ್ಳಿ ಗ್ರಾಮದ ದಯಾನಂದ ಹಾಸು ಬಂಧಿತ ಆರೋಪಿ. ಈತ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಬಕಾರಿ ಪೊಲೀಸರು ನಗರದ ಸ್ಟೇಷನ್ ಬಜಾರ್ ಏರಿಯಾದಲ್ಲಿ ದಾಳಿ ನಡೆಸಿ ಬಂದಿಸಿದ್ದಾರೆ.
ದಾಳಿ ವೇಳೆ 17 ಲೀಟರ್ ಮದ್ಯ, 70 ಲೀಟರ್ ಬಿಯರ್ ಜಪ್ತಿ ಮಾಡಿಕೊಂಡಿದ್ದಾರೆ. ದಾಳಿ ವೇಳೆ ಆರೋಪಿ ಬಳಿ ಒಂದು ಪಿಸ್ತೂಲ್ ಹಾಗೂ 10 ಜೀವಂತ ಗುಂಡುಗಳು ಪತ್ತೆಯಾಗಿವೆ. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.