ETV Bharat / state

ವಾಹನ ಹರಿದು ವ್ಯಕ್ತಿ ಸಾವು: ರಸ್ತೆ ಮೇಲೆ ಶವ ಇಟ್ಟು ಸಂಬಂಧಿಕರ ಆಕ್ರೋಶ - kalburgi accident

ಶವದ ಮರಣೋತ್ತರ ಪರೀಕ್ಷೆ ಮುಗಿದ ನಂತರ ಮೃತನ ದೇಹವನ್ನು ರಸ್ತೆ ಮೇಲೆ ಇಟ್ಟು ಪಂಚಶೀಲ ನಗರ ನಿವಾಸಿಗಳು ಪ್ರತಿಭಟನೆ ನಡೆಸಿದರು.

ರಸ್ತೆ ಮೇಲೆ ಶವ ಇಟ್ಟು ಪೋಷಕರ ಆಕ್ರೋಶ
author img

By

Published : Jul 27, 2019, 2:09 PM IST

ಕಲಬುರಗಿ: ಕಾರು ಹರಿದು ಪಾದಚಾರಿ‌ ಸಾವನ್ನಪ್ಪಿದ ಹಿನ್ನೆಲೆ ಸಂಬಂಧಿಕರು ರಸ್ತೆ ಮೇಲೆ ಶವ ಇಟ್ಟು ಪ್ರತಿಭಟನೆ ಮಾಡಿದ್ದಾರೆ.

ಕಲಬುರಗಿಯ ಹಳೆ ಜೇವರ್ಗಿ ರಸ್ತೆಯ ಪಂಚಶೀಲ ನಗರದಲ್ಲಿ ಈ ಘಟನೆ ಜರುಗಿದೆ. ಕಳೆದ ರಾತ್ರಿ ಕಾರು ಹರಿದು ಕಿರಣ ಕುಮಾರ್​ ತಳವಾರ (35) ಎಂಬುವರು ಮೃತಪಟ್ಟಿದ್ದರು. ಶವದ ಮರಣೋತ್ತರ ಪರೀಕ್ಷೆ ಮುಗಿದ ನಂತರ ಮೃತನ ದೇಹವನ್ನು ರಸ್ತೆ ಮೇಲೆ ಇಟ್ಟು ಪಂಚಶೀಲ ನಗರ ನಿವಾಸಿಗಳು ಪ್ರತಿಭಟನೆ ನಡೆಸಿದರು.

ರಸ್ತೆ ಮೇಲೆ ಶವ ಇಟ್ಟು ಪೋಷಕರ ಆಕ್ರೋಶ

ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದರಾದರೂ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಬೇಕು, ಅವರ ಮನೆಯೊಬ್ಬರಿಗೆ ಸರ್ಕಾರಿ ನೌಕರಿ ಕೊಡುವಂತೆ ಹಾಗೂ ರಸ್ತೆ ಮೇಲೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಸ್ಥಳೀಯರು ಆಗ್ರಹಿಸಿದರು. ಪ್ರಕರಣ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Intro:ಕಲಬುರಗಿ:ಕಾರು ಹರಿದು ಪಾದಾಚಾರಿ‌ ಸಾವನ್ನಪ್ಪಿದ ಪ್ರಕರಣ ಖಂಡಿಸಿ ರಸ್ತೆ ಮೇಲೆ ಶವ ಇಟ್ಟು ಪ್ರತಿಭಟನೆ ಮಾಡಿದ ಘಟನೆ ಕಲಬುರಗಿಯ ಹಳೆ ಜೇವರ್ಗಿ ರಸ್ತೆಯ ಪಂಚಶೀಲ ನಗರದಲ್ಲಿ ನಡೆದಿದೆ.

ಕಳೆದ ರಾತ್ರಿ ಕಾರು ಹರಿದು ವ್ಯಕ್ತಿ ಸಾವನ್ನಪ್ಪಿದ್ದ. ಮೃತ ದುರ್ದೈವಿಯನ್ನು ಕರಣಕುಮಾರ ತಳವಾರ (35) ಎಂದು ಗುರುತಿಸಲಾಗಿದೆ. ಶವದ ಮರಣೋತ್ತರ ಪರೀಕ್ಷೆ ಮುಗಿದ ನಂತರ ಮೃತನ ದೇಹವನ್ನು ರಸ್ತೆ ಮೇಲೆ ಇಟ್ಟು ಪಂಚಶೀಲ ನಗರ ನಿವಾಸಿಗಳು ಪ್ರತಿಭಟನೆ ನಡೆಸಿದರು. ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತದ ವಿರುದ್ದ ಘೋಷಣೆ ಕೂಗಿದರು.ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದರು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಬೇಕು, ಅವರ ಮನೆಯೊಬ್ಬರಿಗೆ ಸರ್ಕಾರಿ ನೌಕರಿ ಕೊಡುವಂತೆ ಹಾಗೂ ರಸ್ತೆ ಮೇಲೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಆಗ್ರಹಿಸಿದರು. ಪೊಲೀಸರ ಮನವೊಲಿಕೆಗೂ ಬಗ್ಗದ ಪ್ರತಿಭಟನಾಕಾರರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ಮಾಡಿದರು. ನಂತರ ಪೊಲೀಸರೇ ಒತ್ತಾಯಪೂರ್ವಕವಾಗಿ ಶವವನ್ನು ತೆರವುಗೊಳಿಸಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿತ್ತು. ಘಟನೆ ನಂತರ ಕಾರು ಸಮೇತ ಕಾರು ಚಾಲಕ ಪರಾರಿಯಾಗಿದ್ದ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.Body:ಕಲಬುರಗಿ:ಕಾರು ಹರಿದು ಪಾದಾಚಾರಿ‌ ಸಾವನ್ನಪ್ಪಿದ ಪ್ರಕರಣ ಖಂಡಿಸಿ ರಸ್ತೆ ಮೇಲೆ ಶವ ಇಟ್ಟು ಪ್ರತಿಭಟನೆ ಮಾಡಿದ ಘಟನೆ ಕಲಬುರಗಿಯ ಹಳೆ ಜೇವರ್ಗಿ ರಸ್ತೆಯ ಪಂಚಶೀಲ ನಗರದಲ್ಲಿ ನಡೆದಿದೆ.

ಕಳೆದ ರಾತ್ರಿ ಕಾರು ಹರಿದು ವ್ಯಕ್ತಿ ಸಾವನ್ನಪ್ಪಿದ್ದ. ಮೃತ ದುರ್ದೈವಿಯನ್ನು ಕರಣಕುಮಾರ ತಳವಾರ (35) ಎಂದು ಗುರುತಿಸಲಾಗಿದೆ. ಶವದ ಮರಣೋತ್ತರ ಪರೀಕ್ಷೆ ಮುಗಿದ ನಂತರ ಮೃತನ ದೇಹವನ್ನು ರಸ್ತೆ ಮೇಲೆ ಇಟ್ಟು ಪಂಚಶೀಲ ನಗರ ನಿವಾಸಿಗಳು ಪ್ರತಿಭಟನೆ ನಡೆಸಿದರು. ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತದ ವಿರುದ್ದ ಘೋಷಣೆ ಕೂಗಿದರು.ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನಿಸಿದರು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಬೇಕು, ಅವರ ಮನೆಯೊಬ್ಬರಿಗೆ ಸರ್ಕಾರಿ ನೌಕರಿ ಕೊಡುವಂತೆ ಹಾಗೂ ರಸ್ತೆ ಮೇಲೆ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಆಗ್ರಹಿಸಿದರು. ಪೊಲೀಸರ ಮನವೊಲಿಕೆಗೂ ಬಗ್ಗದ ಪ್ರತಿಭಟನಾಕಾರರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ಮಾಡಿದರು. ನಂತರ ಪೊಲೀಸರೇ ಒತ್ತಾಯಪೂರ್ವಕವಾಗಿ ಶವವನ್ನು ತೆರವುಗೊಳಿಸಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿತ್ತು. ಘಟನೆ ನಂತರ ಕಾರು ಸಮೇತ ಕಾರು ಚಾಲಕ ಪರಾರಿಯಾಗಿದ್ದ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.