ಕಲಬುರಗಿ: ಚಿತ್ತಾಪುರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಗುದ್ದಾಟ ಮತ್ತಷ್ಟು ತಾರಕಕ್ಕೇರುತ್ತಿದೆ. ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರ ಬೆಂಬಲಿಗರು ನಗರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಮಣಿಕಂಠ ಠಾಠೋಡ್ ಅವರಿಗೆ ಜೀವಭಯವಿದ್ದ, ಪೊಲೀಸರು ಸೂಕ್ತ ಭದ್ರತೆ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.
ನಗರದ ಸರ್ಧಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಣಿಕಂಠ ರಾಠೋಡ್ ವಿರುದ್ಧ ಕೊಲೆ ಸಂಚು ನಡೆಸಲಾಗಿದೆ. ಶಾಸಕರ ಆಪ್ತ ರಾಜು ಕಪನೂರ ಅಕ್ರಮ ನಾಡ ಪಿಸ್ತೂಲ್ ಖರೀದಿಸಿದ್ದೇ, ಇದಕ್ಕೆ ಸಾಕ್ಷಿಯಾಗಿದೆ ಎಂದು ದೂರಿದ್ದಾರೆ.
ಕೊಲೆ ಸಂಚಿನ ಕುರಿತಾಗಿ ಸಿಬಿಐ ಅಥವಾ ಸಿಐಡಿ ತನಿಖೆ ಮಾಡಿಸಬೇಕು. ಮಣಿಕಂಠ ರಾಠೋಡ್ಗೆ ಸೂಕ್ತ ಭದ್ರತೆ ಒದಗಿಸಬೇಕು. ಇಲ್ಲದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಬೆಂಬಲಿಗರು ಎಚ್ಚರಿಸಿದರು.
ಇದನ್ನೂ ಓದಿ: ಪಿಸ್ತೂಲ್ ಖರೀದಿ ಆರೋಪ: ಕಲಬುರಗಿ ಪಾಲಿಕೆ ಮಾಜಿ ಸದಸ್ಯನ ಬಂಧನ