ETV Bharat / state

ಮುಂಬರುವ ವರ್ಷದಿಂದ ಸರ್ದಾರ್ ಪಟೇಲ್ ಜಯಂತಿಯನ್ನ ಸರ್ಕಾರವೇ ಆಚರಿಸಲಿ: ಲಕ್ಷ್ಮಣ ದಸ್ತಿ - Hyderabad Karnataka Janapara Samithi Committee president Laxmana Dasti

ಹೈದರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ನೇತೃತ್ವದಲ್ಲಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಯಂತ್ಯುತ್ಸವ ಆಚರಣೆ ಮಾಡಲಾಯಿತು.

may-the-government-of-sardar-vallabhbhai-patel-jayanti-celebrated-laxman-gasti
ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿ
author img

By

Published : Oct 31, 2020, 3:14 PM IST

ಕಲಬುರಗಿ: ಹೈದರಾಬಾದ್​​ ಕರ್ನಾಟಕ (ಕಲ್ಯಾಣ ಕರ್ನಾಟಕ) ಭಾಗದ ಸ್ವಾತಂತ್ರ್ಯದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಜಯಂತಿಯನ್ನು ಮುಂಬರುವ ವರ್ಷದಿಂದ ಸರ್ಕಾರವೇ ಆಚರಿಸಬೇಕು ಎಂದು ಹೈದರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಆಗ್ರಹಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಜಯಂತ್ಯುತ್ಸವ ಆಚರಣೆ ಮಾಡಲಾಯಿತು.

ಲಕ್ಷ್ಮಣ ದಸ್ತಿ ಮಾತನಾಡಿದರು
ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಹೈ.ಕ ಭಾಗದ ನಿಜಾಮರ ಕಪಿಮುಷ್ಟಿಯಿಂದ ಬಿಡಿಸಲು ಸತತ ಹೋರಾಟ ಮಾಡಿ ಈ ಭಾಗ ಸ್ವಾತಂತ್ರ್ಯವಾಗಲು ಪ್ರಮುಖ ಕಾರಣರಾಗಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿಯನ್ನು ಮುಂದಿನ ವರ್ಷದಿಂದ ಸರ್ಕಾರ ಆಚರಿಸಬೇಕಾಗಿ ವಿನಂತಿಸಿದರು. ಈ ಭಾಗದ ಶಾಸಕ, ಸಂಸದರು ಪಟೇಲ್ ಜಯಂತಿ ಆಚರಣೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕದ ವಿವಿಧೆಡೆ ಹಲವು ಸಂಘ ಸಂಸ್ಥೆಗಳಿಂದ ಪಟೇಲರ ಜಯಂತಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು. ಆದರೆ, ಕೋವಿಡ್ ಕಾರಣದಿಂದಾಗಿ ಈ ಬಾರಿ ಸರಳವಾಗಿ ಜಯಂತಿ ಆಚರಿಸಲಾಯಿತು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.