ಕಲಬುರಗಿ: ಸಿಎಎ, ಎನ್ಆರ್ಸಿ ವಿರೋಧಿಸಿ ಕಲಬುರಗಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಮುಖಕ್ಕೆ ನೋ ಸಿಎಎ, ನೋ ಎನ್ಆರ್ಸಿ ಎಂಬ ಮಾಸ್ಕ್ ಧರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಕೈಗೆ ಕಪ್ಪು ಪಟ್ಟಿ ಕಟ್ಟಿ, ಬಾಯಿಗೆ ಮಾಸ್ಕ್ ಧರಿಸಿ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿ ನೂರಾರು ವೈದ್ಯಕೀಯ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಿಎಎ, ಎನ್ಆರ್ಸಿ ಜನ ವಿರೋಧಿ ಕಾಯ್ದೆಗಳಾಗಿದ್ದು, ಕೇಂದ್ರ ಬಿಜೆಪಿ ಸರ್ಕಾರ ಈ ಕಾಯ್ದೆ ಜಾರಿ ಮಾಡುವ ಮೂಲಕ ಧರ್ಮ ಒಡೆಯುವ ಪ್ರಯತ್ನ ನಡೆಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೂಡಲೇ ಕೇಂದ್ರ ಸರ್ಕಾರ ಜನ ವಿರೋಧಿ ಎನ್ಆರ್ಸಿ, ಸಿಎಎ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿದರು.