ETV Bharat / state

ಡಿಕೆಶಿ ಪರಿಶುದ್ಧರಾಗಿದ್ರೆ ಸೀತೆಯಂತೆ ಪಾವಿತ್ರ್ಯತೆಯಿಂದ ಹೊರಬರಲಿ: ಈಶ್ವರಪ್ಪ

author img

By

Published : Oct 7, 2020, 1:20 PM IST

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಸೀತೆಯಂತೆ ಪವಿತ್ರವಾಗಿದ್ದರೆ ಸಿಬಿಐ ವಿಚಾರಣೆ ಎದುರಿಸಿ ಹೊರಬರಲಿ ಎಂದು ಸಚಿವ ಈಶ್ವರಪ್ಪ ಹೇಳಿದರು.

minister eshwarappa
ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ ಕುರಿತಂತೆ ಈಶ್ವರಪ್ಪ ಪ್ರತಿಕ್ರಿಯೆ

ಕಲಬುರಗಿ: ಕೆಪಿಸಿಸಿ ಅಧ್ಯಕ್ಷ ಡಿ‌. ಕೆ. ಶಿವಕುಮಾರ್ ಪರಿಶುದ್ಧವಾಗಿದ್ದರೆ ಸೀತೆಯಂತೆ ಪಾವಿತ್ರ್ಯತೆಯಿಂದ ಹೊರ ಬರಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಬೈ ಎಲೆಕ್ಷನ್​ನಲ್ಲಿ ಸೋಲುವ ಭೀತಿಯಿಂದ ಡಿಕೆಶಿ ನಿವಾಸದ ಮೇಲೆ ಬಿಜೆಪಿ ಸಿಬಿಐ ಅಸ್ತ್ರ ಪ್ರಯೋಗಿಸಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು ಎಂದರು.

ಈ ಹಿಂದೆ ಯಡಿಯೂರಪ್ಪ ಮನೆ ಮೇಲೂ ಸಿಬಿಐ ದಾಳಿ ನಡೆದಿತ್ತು. ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಆ ಟೈಮಲ್ಲಿ ಯಡಿಯೂರಪ್ಪ ತನಿಖೆ ಎದುರಿಸಿ ನಿರಪರಾಧಿಯಾಗಿ ಹೊರ ಬಂದರು. ಅದರಂತೆ ಡಿಕೆಶಿಯೂ ನಿರಪರಾಧಿ ಎಂದು ಸಾಬೀತು ಪಡಿಸಲಿ ಎಂದು ಟಾಂಗ್ ಕೊಟ್ಟರು.

ಬಿಜೆಪಿ ನಾಯಕರ ಬಗ್ಗೆ ಸಿದ್ದರಾಮಯ್ಯ ಏಕವಚನ ಪ್ರಯೋಗ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಮಾತು ಅವರ ಸಂಸ್ಕೃತಿ ಏನಂತ ತೋರಿಸುತ್ತೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್, ತೇಜಸ್ವಿ ಸೂರ್ಯ ಬಗ್ಗೆ ಅವರು ಆಡಿರುವ ಮಾತುಗಳನ್ನು ಗಮನಿಸಿದ್ದೇನೆ. ಸಿದ್ದರಾಮಯ್ಯ ವರ್ತನೆಯಿಂದಾಗಿಯೇ ಕಾಂಗ್ರೆಸ್ ನೆಲಕಚ್ಚಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯ ಸೋಲು ಕಂಡರು‌‌. ಸಿಎಂ ಹುದ್ದೆಯಿಂದ ಕೆಳಗಿಳಿದು ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಕುಳಿತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಈಗಲಾದರೂ ಬುದ್ಧಿ ಕಲಿಯಬೇಕು. ಅವರ ವರ್ತನೆ ಹೀಗೆ ಮುಂದುವರಿದರೆ ಕಾಂಗ್ರೆಸ್ ನೆಲದಿಂದಲೂ ಕೆಳಗೆ ಕುಸಿಯುತ್ತದೆ ಎಂದು ಸಚಿವ ಈಶ್ವರಪ್ಪ ಲೇವಡಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.