ಕಲಬುರಗಿ:ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ ವೇಳೆ ಸಚಿವ ಕೆ.ಎಸ್. ಈಶ್ವರಪ್ಪ ಸಾಮಾಜಿಕ ಅಂತರ ಮರೆತು ನಿರ್ಲಕ್ಷ್ಯ ತೋರಿದ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ.
ನಂತರ ನಡೆದ ಸನ್ಮಾನ ಕಾರ್ಯಕ್ರಮದಲ್ಲೂ ಸಾಮಾಜಿಕ ಅಂತರ ಕಾಣಿಸಲಿಲ್ಲ. ಹೆಮ್ಮಾರಿ ಕೊರೊನಾ ಬಗ್ಗೆ ಸಚಿವರ ನಿರ್ಲಕ್ಷ್ಯ ಎದ್ದು ಕಾಣಿಸುತ್ತಿತ್ತು. ಈ ವೇಳೆ ಸಂಸದ ಉಮೇಶ್ ಜಾಧವ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಭಾಗವಹಿಸಿದ್ರು.