ETV Bharat / state

ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ಪಕ್ಷದ ಪಾರ್ಟ್-2 ಅಷ್ಟೇ.. ಸಚಿವ ಕೆ ಎಸ್‌ ಈಶ್ವರಪ್ಪ - ಹಿಜಾಬ್ ವಿವಾದ

ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆ ಜಾರಿ ಮಾಡಲು ಮುಂದಾಗಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಡಿಪಿಆರ್ ಮಾಡಿದ್ದು ಹೆಚ್.ಡಿ ಕುಮಾರಸ್ವಾಮಿ ಅವಧಿಯಲ್ಲಿ. ಆದ್ರೆ ಕಾಂಗ್ರೆಸ್​ನವರು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಸಚಿವ ಕೆ.ಎಸ್​.ಈಶ್ವರಪ್ಪ ವಾಗ್ದಾಳಿ ನಡೆಸಿದರು..

ಕೆ.ಎಸ್​.ಈಶ್ವರಪ್ಪ
ಕೆ.ಎಸ್​.ಈಶ್ವರಪ್ಪ
author img

By

Published : Feb 27, 2022, 12:42 PM IST

ಕಲಬುರಗಿ : ಕಾಂಗ್ರೆಸ್​ನವರು ಪಾದಯಾತ್ರೆ ಮಾಡುವುದಕ್ಕೆ ನಮ್ಮ ಅಭ್ಯಂತ‌ರ ಇಲ್ಲ. ಆದರೆ, ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಡಿಪಿಆರ್ ಮಾಡಿದ್ದು ಹೆಚ್​.ಡಿ ಕುಮಾರಸ್ವಾಮಿ ಅವಧಿಯಲ್ಲಿ. ಇದು ಕಾಂಗ್ರೆಸ್ ಪಕ್ಷದ ಪಾರ್ಟ್-2 ಅಷ್ಟೇ ಎಂದು ಸಚಿವ ಕೆ.ಎಸ್​.ಈಶ್ವರಪ್ಪ ಹೇಳಿದರು.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಪಾದಯಾತ್ರೆ ಮಾಡುವುದಕ್ಕೆ ನಮ್ಮ ಅಭ್ಯಂತ‌ರ ಇಲ್ಲ.

ಆದರೆ, ಕಾಂಗ್ರೆಸ್​​ನವರು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು, ಮೇಕೆದಾಟು ಯೋಜನೆ ಜಾರಿ ಮಾಡಲು ಮುಂದಾಗಿದ್ದೇವೆ. ಕಾಂಗ್ರೆಸ್​ನವರು ಅಧಿಕಾರದಲ್ಲಿ ಇದ್ದಾಗ ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿರುವ ಸಚಿವ ಕೆ ಎಸ್ ಈಶ್ವರಪ್ಪ..

ಹಿಜಾಬ್ ವಿವಾದ : ಯು.ಟಿ.ಖಾದರ್ ನೇತೃತ್ವದಲ್ಲಿ ಎಲ್ಲಾ ಕಾಂಗ್ರೆಸ್ ಮುಸ್ಲಿಂ ಶಾಸಕರು ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕರು ಹಿಜಾಬ್ ಗಲಾಟೆಗೆ ಎಸ್​ಡಿಪಿಐ ಮತ್ತು ಪಿಎಫ್ಐ ಕಾರಣ ಎಂದು ಬ್ಯಾನ್ ಮಾಡಬೇಕು ಅಂತಾ ಹೇಳಿದ್ದಾರೆ. ರಾಜ್ಯದಲ್ಲಿ ಗಲಭೆ ಆಗೋದಕ್ಕೆ ಕಾಂಗ್ರೆಸ್ ಕಾರಣ, ಹಿಂದೂ-ಮುಸ್ಲಿಂ ದೂರ ದೂರ ಆಗಬೇಕು. ಮುಸ್ಲಿಂ ಮತಗಳು ಕಾಂಗ್ರೆಸ್​ಗೆ ಬರಬೇಕು ಎಂದು ಈ ರೀತಿ ಕುತಂತ್ರ ರಾಜಕಾರಣವನ್ನು ಕಾಂಗ್ರೆಸ್​ನವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಡಿಕೆಶಿ ರಾಷ್ಟ್ರದ್ರೋಹಿ : ರಾಷ್ಟ್ರಧ್ವಜಕ್ಕೆ ಯಾರು ಅಪಮಾನ ಮಾಡ್ತಾರೋ ಅವರು ರಾಷ್ಟ್ರದ್ರೋಹಿಗಳು ಅಂತಾ ಸ್ಪಷ್ಟವಾಗಿ ಹೇಳಿದ್ದೇನೆ. ರಾಷ್ಟ್ರಧ್ವಜಕ್ಕೆ ಮೊದಲು ಅಪಮಾನ ಮಾಡಿದ್ದೇ ಡಿ.ಕೆ ಶಿವಕುಮಾರ್, ಸದನದಲ್ಲಿ ರಾಷ್ಟ್ರಧ್ವಜ ಹಿಡಿದು 2ನೇ ಬಾರಿ ಅವಮಾನ ಮಾಡಿದ್ರು. ರಾಷ್ಟ್ರಪ್ರೇಮದ ಕುರಿತು ಕಾಂಗ್ರೆಸ್​ನವರಿಗೆ ಗೊತ್ತಿಲ್ಲ. ಡಿಕೆಶಿ ಮೇಲೆ‌ ಕೇಸ್ ಹಾಕಬೇಕು ಅಂತಾ ಸಿಎಂ ಮತ್ತು ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.