ETV Bharat / state

ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ಮಾತ್ರ ಸೀಮಿತವಾಗಿಸಿ ಸಭಾಪತಿಗಳಿಂದ ತನಿಖೆಗೆ ಆದೇಶ : ಸಚಿವ ಮಾಧುಸ್ವಾಮಿ

author img

By

Published : Jan 5, 2021, 1:32 PM IST

ಸಭಾಪತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ 14 ದಿನ ಕಳೆದಿತ್ತು. ಹೀಗಾಗಿ ಅವರಾಗಿಯೇ ಕುರ್ಚಿ ಬಿಟ್ಟು ಕೊಡುತ್ತಾರೆ ಎನ್ನುವ ವಿಶ್ವಾಸ ಇತ್ತು. ಬೆಲ್ ನಂತರವೂ ಸಭಾಪತಿ ಬಾರದಿರುವ ಕಾರಣ ಉಪಸಭಾಪತಿ ಅವರನ್ನು ಕೂರಿಸಲಾಯಿತು..

Bustle
Bustle

ಕಲಬುರಗಿ : ವಿಧಾನ ಪರಿಷತ್ತಿನಲ್ಲಿ ನಡೆದ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ಸಭಾಪತಿ ಆದೇಶಿಸಿರುವ ತನಿಖೆ ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ಮಾತ್ರ ಸೀಮಿತವಾಗಿದೆ. ಪರಿಷತ್ ಸದಸ್ಯರ ನಡವಳಿಕೆಗಳ ಬಗ್ಗೆ ತನಿಖೆಗೆ ಸಭಾಪತಿ ಆದೇಶ ನೀಡಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಪರಿಷತ್​ನಲ್ಲಿ ಈ ರೀತಿಯ ಗದ್ದಲ, ಗಲಾಟೆಯನ್ನು ಯಾರೂ ನಿರೀಕ್ಷಿಸಿರಲಿಲ್ಲ. ‌ಸಭಾಪತಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ 14 ದಿನ ಕಳೆದಿತ್ತು. ಹೀಗಾಗಿ ಅವರಾಗಿಯೇ ಕುರ್ಚಿ ಬಿಟ್ಟು ಕೊಡುತ್ತಾರೆ ಎನ್ನುವ ವಿಶ್ವಾಸ ಇತ್ತು. ಬೆಲ್ ನಂತರವೂ ಸಭಾಪತಿ ಬಾರದಿರುವ ಕಾರಣ ಉಪಸಭಾಪತಿ ಅವರನ್ನು ಕೂರಿಸಲಾಯಿತು.

ಪರಿಷತ್ ಗದ್ದಲದ ತನಿಖೆ ಕೇವಲ ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ಮಾತ್ರ ಸೀಮಿತ..

ನಂತರ ಅನಿರೀಕ್ಷಿತ ರೀತಿಯಲ್ಲಿ ಗದ್ದಲ ನಡೆಯಿತು. ‌ಈ ಕುರಿತು ನಡೆಯುತ್ತಿರುವ ತನಿಖೆ ಕೇವಲ ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ಮಾತ್ರ ಸೀಮಿತವಾಗಿದೆ ಎಂದರು. ಇನ್ನು, ವಿಲೀನದ ಹೆಸರಲ್ಲಿ ಜೆಡಿಎಸ್ ಇಬ್ಘಾಗ ಮಾಡಲು ಬಿಜೆಪಿ ತಂತ್ರ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಕುಮಾರಸ್ವಾಮಿ ಅವರೇ ವಿಧಾನ ಪರಿಷತ್ತಿನಲ್ಲಿ ನಮಗೆ ಬೆಂಬಲಿಸಿದ್ದಾರೆ.

ಕಳೆದ ಒಂದು ವರ್ಷದಿಂದ ರಾಜ್ಯ ವಿವಿಧ ಸಂಕಷ್ಟ ಎದುರಿಸುತ್ತಿರುವ ಹಿನ್ನೆಲೆ ಯಾವುದೇ ಶಾಸಕರಿಗೂ ಮೊದಲಿನಂತೆ ಬಜೆಟ್ ನೀಡಲು ಸಾಧ್ಯವಾಗಿಲ್ಲ. ಎಲ್ಲಾ ಕೆಲಸವು ಸರಿಯಾಗಿ ಆಗಿದೆ ಎಂದು ಆತ್ಮವಿಶ್ವಾಸದಿಂದ ಯಾರು ಹೇಳುವ ಸ್ಥಿತಿಯಲ್ಲಿ ಇಲ್ಲ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.