ETV Bharat / state

ಸಿಎಂ ಹುದ್ದೆಗೆ ಲಾಬಿ ಮಾಡ್ತಿಲ್ಲ, ಹೈಕಮಾಂಡ್​ ನಿರ್ಧಾರವೇ ಅಂತಿಮ: ನಿರಾಣಿ - ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಲಾಬಿ ಮಾಡ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಹೈಕಮಾಂಡ್​ ನಿರ್ಧಾರವೇ ಅಂತಿಮ
ಹೈಕಮಾಂಡ್​ ನಿರ್ಧಾರವೇ ಅಂತಿಮ
author img

By

Published : Jul 24, 2021, 11:43 AM IST

Updated : Jul 24, 2021, 12:43 PM IST

ಕಲಬುರಗಿ: ರಾಜ್ಯದಲ್ಲಿ ಸಿಎಂ ಬಿಎಸ್​ವೈ ಸುದ್ದಿ ಸದ್ದು ಮಾಡ್ತಿರುವ ಈ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಹಲವರ ಹೆಸರುಗಳು ಕೇಳಿಬರುತ್ತಿವೆ. ಈ ಕುರಿತಂತೆ ತಾವು ಲಾಬಿ ಮಾಡುತ್ತಿಲ್ಲ, ರಾಷ್ಟ್ರಿಯ ನಾಯಕರು ಅಳೆದು ತೂಗಿ ಅರ್ಹರನ್ನು ಸಿಎಂ ಮಾಡುತ್ತಾರೆ ಅಂತಾ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

ಸಿಎಂ ಹುದ್ದೆಗೆ ಲಾಬಿ ಮಾಡ್ತಿಲ್ಲ: ಸಚಿವ ನಿರಾಣಿ

ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ 120 ಜನ ಶಾಸಕರೆಲ್ಲರೂ ಸಿಎಂ ಹುದ್ದೆಗೆ ಅರ್ಹತೆ ಹೊಂದಿದ್ದಾರೆ. ನಿರೀಕ್ಷೆಯಿಲ್ಲದೆ ಪಕ್ಷ ನನಗೆ ಹಲವು ಜವಾಬ್ದಾರಿ ನೀಡಿದೆ. ಮೊದಲ ಬಾರಿ ಶಾಸಕನಾದಾಗಲೇ ಹೈಕಮಾಂಡ್ ನನ್ನನ್ನು ಸಚಿವನನ್ನಾಗಿ ಮಾಡಿದೆ. ಈಗಲು ಮಹತ್ವದ ಜವಾಬ್ದಾರಿ ಕೊಟ್ಟಿದೆ. ಹಿಂದೆಯೂ ನಾನು ಯಾವುದೇ ಹುದ್ದೆ ಅಪೇಕ್ಷೆ ಮಾಡಿದವನಲ್ಲ, ಈಗಲೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ :ವರುಣಾರ್ಭಟಕ್ಕೆ ಉತ್ತರ ಕರ್ನಾಟಕ ತತ್ತರ: ನಾಳೆ ಮುಖ್ಯಮಂತ್ರಿಯಿಂದ ಪರಿಸ್ಥಿತಿ ಅವಲೋಕನ

ದೇವಸ್ಥಾನಕ್ಕೆ ಹೋಗಿ ಬಂದರೆ ನೆಮ್ಮದಿ!

ಸಾಮಾನ್ಯವಾಗಿ ತಿಂಗಳು - ಎರಡು ತಿಂಗಳಿಗೊಮ್ಮೆ ದೇವಸ್ಥಾನಕ್ಕೆ ಹೋಗಿ ಬಂದರೆ ಸಮಾಧಾನ ಆಗುತ್ತೆ. ಅದೇ ಕಾರಣಕ್ಕೆ ನಾನು ವಾರಣಾಸಿಗೆ ಹೋಗಿದ್ದೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಜನ ವೋಟು ಹಾಕಿ ಕಳಿಸಿದ್ದಾರೆ. ಜನರ ನಿರೀಕ್ಷೆಯಂತೆ ಕೆಲಸ ಮಾಡುವುದೊಂದೇ ನನ್ನ ಮೂಲ ಉದ್ದೇಶ ಎಂದರು.

ಯಡಿಯೂರಪ್ಪನವರೇ ನಮ್ಮ ನಾಯಕರು

ರಾಜ್ಯದಲ್ಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಅಧಿಕೃತವಾಗಿ ಈವರೆಗೆ ಯಾವುದೇ ಸೂಚನೆ ಬಂದಿಲ್ಲ. ಯಡಿಯೂರಪ್ಪನವರೇ ನಮ್ಮ ನಾಯಕರು. ಅವರ ಜೊತೆ ನಾವಿರುತ್ತೇವೆ ಎಂದು ಸಂಸದ ಡಾ. ಉಮೇಶ್ ಜಾಧವ್ ಹೇಳಿದ್ದಾರೆ.

ಯಡಿಯೂರಪ್ಪನವೇ ನಮ್ಮ ನಾಯಕರು: ಉಮೇಶ್ ಜಾಧವ್

ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿ ನೋಡಿ ಕಾಂಗ್ರೆಸ್ ತೊರೆದು ನಾನು ಬಿಜೆಪಿಗೆ ಬಂದಿದ್ದೇನೆ. ನಮಗೆ ಬಿಎಸ್‌ವೈ ಜೊತೆಗೆ ಪಾರ್ಟಿನೂ ಅಷ್ಟೇ ಮುಖ್ಯ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಅಂತಾ ಸ್ಪಷ್ಟಪಡಿಸಿದ್ದಾರೆ.

‘ಬಿಎಸ್​ವೈ ನಮಗೆ ಧೈರ್ಯ ಹೇಳಿದ್ದಾರೆ’

ಸದ್ಯದ ರಾಜಕೀಯ ಬೆಳವಣಿಗೆಯಿಂದ ಯಾರೂ ಆತಂಕಕ್ಕೆ ಒಳಗಾಗಬಾರದೆಂದು ಸಿಎಂ ಬಿಎಸ್​​ವೈ ನಮಗೆ ಧೈರ್ಯ ಹೇಳಿದ್ದಾರೆ. ಬಿಜೆಪಿ ಅತಿ ದೊಡ್ಡ ಪಕ್ಷವಾಗಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಗಳನ್ನು ನಾವು ಪಾಲಿಸಬೇಕಿದೆ ಎಂದರು.

Last Updated : Jul 24, 2021, 12:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.