ಕಲಬುರಗಿ: ಪಶು ಸಂಜೀವಿನಿ ಆ್ಯಂಬುಲೆನ್ಸ್ಗೆ ಹಜ್ ಮತ್ತು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ ಚಾಲನೆ ನೀಡಿದ್ದಾರೆ.
ನಗರದ ಐವಾನ್ ಶಾಹಿ ಅತಿಥಿ ಗೃಹದ ಆವರಣದಲ್ಲಿ ಸಂಜೀವಿನಿ ಸಂಚಾರಿ ಪಶು ಚಿಕಿತ್ಸಾಲಯ ಆ್ಯಂಬುಲೆನ್ಸ್ಗೆ ಹಸಿರು ನಿಶಾನೆ ತೋರಿಸಲಾಯಿತು. ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಆರಂಭಿಸಲಾಗಿರುವ ಈ ಸಂಜೀವಿನಿ ಆ್ಯಂಬುಲೆನ್ಸ್ ಯೋಜನೆಯು ಪಶುಗಳಿಗೆ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ. ಈ ಆ್ಯಂಬುಲೆನ್ಸ್ ಜಿಲ್ಲೆಯ ವಿವಿಧೆಡೆ ಸಂಚರಿಸಿ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ.
ಇಂದು ಸುಸಜ್ಜಿತ ಪಶು ಚಿಕಿತ್ಸಾ ವಾಹನವನ್ನು ಲೋಕಾರ್ಪಣೆಗೊಳಿಸಿದ್ದು, ಜಾನುವಾರುಗಳಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ರೈತರ ಮನೆ ಬಾಗಿಲಿಗೆ ನಮ್ಮ ಇಲಾಖೆಯ ವಾಹನ ತಲುಪಲಿದೆ. ಹಾಗೇ ಸಿಬ್ಬಂದಿ ಚಿಕಿತ್ಸೆ ನೀಡಲಿದ್ದಾರೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಚಿವ ಪ್ರಭು ಚೌವ್ಹಾಣ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.