ETV Bharat / state

371ನೇ ಜೆ ಅನುಚ್ಛೇದ ಉಪ ಸಮಿತಿಗೆ ಅಧ್ಯಕ್ಷರಾಗಿ ಸಚಿವ ಪ್ರಿಯಾಂಕ್ ಖರ್ಗೆ ನೇಮಕ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಸರ್ಕಾರದ ಜಂಟಿ ಕಾರ್ಯದರ್ಶಿ ಪ್ರಿಯಾಂಕ್ ಖರ್ಗೆ ಅವರನ್ನು ಅಧ್ಯಕ್ಷರಾಗಿ ನೇಮಿಸಲು ಆದೇಶ ಹೊರಡಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
author img

By

Published : Jul 19, 2023, 10:26 PM IST

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶಕ್ಕಾಗಿ ಸರ್ಕಾರ ಹೊರಡಿಸಲಾದ ಅನುಷ್ಠಾನದ ಪ್ರಗತಿ ಪರಿಶೀಲಿಸಲು ಸಚಿವ ಸಂಪುಟ ಸಮಿತಿ ರಚಿಸಲಾಗಿದ್ದು, ಆ ಸಮಿತಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ, ಬಿಟಿ ಜೊತೆಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಜಂಟಿ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಆದೇಶ ಹೊರಡಿಸಿದ್ದು, ಪ್ರಿಯಾಂಕ್​ ಖರ್ಗೆ ಅವರನ್ನು ಅಧ್ಯಕ್ಷರಾಗಿ ನೇಮಿಸಲಾಗಿದೆ. ಉಳಿದಂತೆ ಸಮಿತಿಗೆ ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಡಾ ಶರಣಪ್ರಕಾಶ ಪಾಟೀಲ್, ಡಿ. ಸುಧಾಕರ್, ಬಿ.ನಾಗೇಂದ್ರ ಹಾಗೂ ಎನ್.ಎಸ್ ಬೋಸರಾಜ್ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಭಾರತದ ಸಂವಿಧಾನದ ಅನುಚ್ಛೇದ 371 ಜೆ ಅಡಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಸಚಿವ ಸಂಪುಟದ ಉಪ ಸಮಿತಿ ಪರಿಶೀಲಿಸಲಿದೆ. ಸದರಿ ಸಮಿತಿಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಈ ಸಮಿತಿಗೆ ಅಗತ್ಯ ನೆರವು ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಸ್ವಾಗತ : ಪ್ರಿಯಾಂಕ್ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿ ನೇಮಕ ಮಾಡಿರುವುದು ಸ್ವಾಗತಾರ್ಹವಾದ ಕ್ರಮವಾಗಿದೆ. ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಕಲ್ಯಾಣದ ಜನಮಾನಸದ ವತಿಯಿಂದ ವಿಶೇಷ ಸ್ಥಾನಮಾನ ಅನುಷ್ಠಾನದ ಪರಿಶೀಲನಾ ಸಂಪುಟ ಉಪ ಸಮಿತಿಗೆ ಕಲ್ಯಾಣ ಕರ್ನಾಟಕದ ಸಚಿವರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಸರ್ಕಾರದ ಮುಂದೆ ಇಟ್ಟಿರುವ ಈ ಬೇಡಿಕೆಗೆ ಸ್ಪಂದನೆ ಸಿಕ್ಕಿರುವುದು ಸಂತಸ ತಂದಿದೆ.

ಪ್ರಿಯಾಂಕ್ ಖರ್ಗೆರವರು ಆಡಳಿತದಲಿರಲ್ಲಿ, ವಿರೋಧ ಪಕ್ಷದ ಸ್ಥಾನದಲ್ಲಿ ಇರಲಿ ಕಲ್ಯಾಣ ಕರ್ನಾಟಕದ 371ನೇ ಜೆ ಕಲಂ ಅಡಿ ನಮ್ಮ ಹಕ್ಕಿನ ನೇಮಕಾತಿಗಳ ಬಗ್ಗೆ ಮತ್ತು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ವಿಷಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಪ್ರಿಯಾಂಕ್ ಖರ್ಗೆರವರು 371 ಜೇ ಕಲಂ ಅನುಚ್ಛೇದ ಅನುಷ್ಠಾನದ ಸಂಪುಟ ಉಪಸಮಿತಿಗೆ ಅಧ್ಯಕ್ಷರಾಗಿ ನೇಮಕವಾಗಿರುವುದು ವಿಶೇಷ ಸ್ಥಾನಮಾನದ ಪರಿಣಾಮಕಾರಿ ಅನುಷ್ಠಾನಕ್ಕೆ ಬಲ ಬಂದಂತಾಗಿದೆ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ ತಿಳಿಸಿದ್ದಾರೆ.

ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ : ಕಳೆದ ಜೂನ್ 20 ರಂದು ಪೊಲೀಸ್, ಅಬಕಾರಿ, ಕಂದಾಯ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಚಿವರ ನಿರ್ದೇಶನದಂತೆ ಕೈಗೊಂಡ ಕ್ರಮಗಳ ಅನುಪಾಲನಾ ವರದಿ ಸಲ್ಲಿಸಿದ್ದರು.

ಬಳಿಕ ಅಕ್ರಮ ಚಟುವಟಿಕೆ ಮಾಡುವವರೊಂದಿಗೆ ಪೊಲೀಸರ ಕೈಜೋಡಿಸುವಿಕೆ, ಸಿವಿಲ್ ಪ್ರಕರಣಗಳಲ್ಲಿ ಪೊಲೀಸರ ಒತ್ತಾಯದ ರಾಜಿ ಹೀಗೆ ಮುಂತಾದ ಪ್ರಮುಖ ವಿಚಾರಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಎಲ್ಲ ಅಕ್ರಮ ಚಟುವಟಿಕೆಗಳನ್ನು ತಡೆಯಬೇಕು ಎಂದು ಸಮಯ ನಿಗದಿಪಡಿಸಿದ್ದೆ. ಈ ಹಿನ್ನೆಲೆಯಲ್ಲಿ ಚುರುಕಾದ ಪೊಲೀಸ್ ಇಲಾಖೆ ಅಧಿಕಾರಿಗಳು ತಾವು ಕೈಗೊಂಡ ಕ್ರಮಗಳ ಬಗ್ಗೆ ಸವಿವರವಾದ ವರದಿಯೊಂದನ್ನು ಸಲ್ಲಿಸಿದ್ದಾರೆ ಎಂದು ಪ್ರಿಯಾಂಕ್​ ಖರ್ಗೆ ಪತ್ರಿಕಾ ಹೇಳಿಕೆ ನೀಡಿದ್ದರು.

ಇದನ್ನೂ ಓದಿ : ಕಲಬುರಗಿ ಜಿಲ್ಲೆಯ ಅಪರಾಧ ಕೃತ್ಯಗಳ ಅಂಕಿ ಸಂಖ್ಯೆಗಳು.. ಸಚಿವ ಪ್ರಿಯಾಂಕ್ ಖರ್ಗೆಯಿಂದ ಅನುಪಾಲನಾ ವರದಿ ಬಿಡುಗಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.