ಕಲಬುರಗಿ: ನೆರೆ ರಾಜ್ಯಗಳಲ್ಲಿ ಕೊರೊನಾ ಹಾವಳಿ ಮತ್ತೆ ಹೆಚ್ಚಾಗುತ್ತಿರುವುದರಿಂದ, ಈಗಾಗಲೇ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಾರ್ಗಸೂಚಿ ಹೊರಡಿಸಲಾಗಿದೆ. ಮಹಾರಾಷ್ಟ್ರ ಸಹ ಕಲಬುರಗಿ ಗಡಿಗೆ ಹೊಂದಿಕೊಂಡಿದ್ದರಿಂದ ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಬಾಗಲಕೋಟೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ