ಕಲಬುರಗಿ: ಅಫಜಲಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಭೇಟಿ ನೀಡಿದರು.
ರಾಜ್ಯ ಪ್ರವಾಸದಲ್ಲಿರುವ ಸಚಿವರು ಇಂದು ಬೆಳಗ್ಗೆ ದತ್ತಾತ್ರೇಯನ ಪಾದುಕೆ ದರ್ಶನ ಪಡೆದು, ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಮಹಾಮಾರಿ ಕೊರೊನಾ ದೂರವಾಗಲೆಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.
ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ಸೇರಿದಂತೆ ಮತ್ತಿತರರು ಸಚಿವರಿಗೆ ಸಾಥ್ ನೀಡಿದರು.