ಕಲಬುರಗಿ: ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರ ಪತ್ನಿ, ಶಿವಾಜಿ ಜಯಂತ್ಯುತ್ಸವದಲ್ಲಿ ಮಹಾರಾಷ್ಟ್ರಕ್ಕೆ ಜೈ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.
ನಿನ್ನೆ(ಫೆ.19) ಜಿಲ್ಲೆಯ ಶಹಾಬಾದ್ ಪಟ್ಟಣದ ಭಾರತ್ ಚೌಕ್ನಲ್ಲಿ ಮರಾಠ ಸಮಾಜ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಯುವ ಮಂಡಳಿ ಆಯೋಜಿಸಿದ್ದ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕರ ಪತ್ನಿ ಜಯಶ್ರೀ ಮತ್ತಿಮೂಡ ಭಾಷಣ ಮಾಡಿದರು.
ಮರಾಠಿಯಲ್ಲಿಯೇ ಭಾಷಣ ಮಾಡಿದ ಜಯಶ್ರೀ ತಮ್ಮ ಮಾತಿನ ಕೊನೆಗೆ ಜೈ ಹಿಂದ್, ಜೈ ಮಹಾರಾಷ್ಟ್ರ, ಜೈ ಶಿವಾಜಿ ಎಂದು ಹೇಳುವ ಮೂಲಕ ಕನ್ನಡಿಗರ ಕಣ್ಣು ಕೆಂಪಾಗಿಸಿದ್ದಾರೆ.