ETV Bharat / state

ಯಡಿಯೂರಪ್ಪ ನಾಯಕತ್ವ ಬದಲಾವಣೆ ಪ್ರಶ್ನೆ ಅಪ್ರಸ್ತುತ; ದತ್ತಾತ್ರೇಯ ಪಾಟೀಲ - ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ವಿಚಾರ

ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ, ಕೊರೊನಾ ದುಸ್ಥಿತಿಯಲ್ಲಿ ನಾಯಕತ್ವ ಬದಲಾವಣೆ ಮಾತನಾಡುವುದು ಕೂಡ ತಪ್ಪು ಎಂದು ಶಾಸಕ ದತ್ತಾತ್ರೇಯ ಪಾಟೀಲ ಹೇಳಿದ್ರು.

kalburgi
kalburgi
author img

By

Published : May 28, 2021, 8:19 PM IST

Updated : May 28, 2021, 8:35 PM IST

ಕಲಬುರಗಿ: ಸಿಎಂ ಬಿಎಸ್ ಯಡಿಯೂರಪ್ಪ ಸಮರ್ಥ ನಾಯಕರು, ಅವರ ಬದಲಾವಣೆಯ ಮಾತೇ ಇಲ್ಲ ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಹಾಗೂ ಕೆಕೆಆರ್​ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಸಿಎಂ ಬಿಎಸ್‌ವೈ ಕೋವಿಡ್ ನಿಯಂತ್ರಣಕ್ಕೆ ಸಾಕಷ್ಟು ಶ್ರಮ ಹಾಕಿದ್ದಾರೆ. ಬೇರೆ ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಹೀಗಿರುವಾಗ ಅವರ ನಾಯಕತ್ವ ಬದಲಾವಣೆ ಅಪ್ರಸ್ತುತ ಎಂದರು.

ಸಿಎಂ ಯಡಿಯೂರಪ್ಪ ಜನರನ್ನು ಹಾಗೂ ಎಲ್ಲಾ ಶಾಸಕರನ್ನು ಗಣನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇಂತಹ ಕೊರೊನಾ ದುಸ್ಥಿತಿಯಲ್ಲಿ ಜನರ ಆರೋಗ್ಯದ ಬಗ್ಗೆ ಗಮನಹರಿಸುವುದು ಅಗತ್ಯವಿದೆ. ನಾಯಕತ್ವ ಬದಲಾವಣೆ ಮಾತನಾಡುವುದು ಕೂಡ ತಪ್ಪು. ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ, ಬಿಎಸ್‌ವೈ ಅವರೇ ನಮ್ಮ ನಾಯಕರು ಎಂದು ಹೇಳಿದರು.

Last Updated : May 28, 2021, 8:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.