ಕಲಬುರಗಿ: ಸಿಎಂ ಬದಲಾವಣೆ ವಿಚಾರ ಕೇವಲ ಉಹಾಪೋಹ. ಕೊರೊನಾ ವಿರುದ್ಧ ಪ್ರಬಲ ಹೋರಾಟ ನಡೆಯುತ್ತಿರುವ ಈ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಅಪ್ರಸ್ತುತ ಎಂದು ಸೇಡಂ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಕೇವಲ ಉಹಾಪೋಹ. ಯಾವುದಕ್ಕೂ ಕಿವಿಗೊಡದೆ ಕ್ಷೇತ್ರದಲ್ಲಿ ಕೊರೊನಾ ವಿರುದ್ಧ ಹೋರಾಡಿ ಎಂದು ನಮ್ಮ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ. ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕರು. ಅವರ ನೇತೃತ್ವದಲ್ಲಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗದ ಸಿಮ್ಸ್ನಲ್ಲಿ ಕೊರೊನಾ ಲಸಿಕೆ ಹಾಕುವ ವೇಳೆ ನೂಕು ನುಗ್ಗಲು
ಸಚಿವ ಯೋಗೇಶ್ವರ್ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎನ್ನುವ ಒತ್ತಡದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾರನ್ನು ಕೈ ಬಿಡಬೇಕು, ಯಾರನ್ನು ತಗೊಬೇಕು ಎನ್ನುವುದು ಸಿಎಂ ಅವರಿಗೆ ಬಿಟ್ಟ ವಿಚಾರ ಎಂದರು.