ಸೇಡಂ (ಕಲಬುರಗಿ): ಎರಡನೇ ಬಾರಿಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರಿಗೆ ಕೋವಿಡ್ ಸೋಂಕು ತಗುಲಿದೆ.
ತಹಶೀಲ್ದಾರ್ ಬಸವರಾಜ ಬೆಣ್ಞೆಶಿರೂರ, ತಾಲೂಕು ಆರೋಗ್ಯಾಧಿಕಾರಿ ಡಾ. ಸುರೇಶ ಮೇಕಿನ್ ಒಳಗೊಂಡಂತೆ ಅನೇಕ ಬಿಜೆಪಿ ಮುಖಂಡರೊಂದಿಗೆ ಬುಧವಾರ ಶಾಸಕರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಇದನ್ನೂ ಓದಿ: ರಾಜ್ಯದಲ್ಲಿಂದು 25,000 ಜನರಿಗೆ ಕೊರೊನಾ ದೃಢ: 1ಲಕ್ಷ ದಾಟಿತು ಸಕ್ರಿಯ ಪ್ರಕರಣಗಳ ಸಂಖ್ಯೆ!
ಇದೇ ವೇಳೆ ತೇಲ್ಕೂರ ಕೋವಿಡ್ ಟೆಸ್ಟ್ಗೂ ಒಳಗಾಗಿದ್ದರು. ನಂತರ ಹಾಲಪ್ಪಯ್ಯ ವಿರಕ್ತ ಮಠದ ಪಂಚಾಕ್ಷರಿ ಸ್ವಾಮೀಜಿಯವರ ಪಟ್ಟಾಧಿಕಾರ ಪೂರ್ವಭಾವಿ ಸಭೆಯಲ್ಲೂ ಪಾಲ್ಗೊಂಡಿದ್ದರು.