ಕಲಬುರಗಿ: ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದವರ ವಿರುದ್ದ ಕಲಬುರಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ಇಸ್ಲಾಮಾಬಾದ್ ಕಾಲೋನಿಯಲ್ಲಿ ರಾಮ್ ಗೌಳಿ ಎಂಬುವವರು ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆ ಕೆಂಚಬಸವೇಶ್ವರ ರುದ್ರಭೂಮಿಯಲ್ಲಿ ನೇರವೇರಿಸಲಾಗಿದೆ. ಲಾಕ್‌ಡೌನ್ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆಯಲ್ಲಿ 20 ಜನರು ಮಾತ್ರ ಪಾಲ್ಗೊಳ್ಳಬೇಕು. ಜೊತೆಗೆ, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಆದ್ರೆ, ಇವರ ಅಂತ್ಯಕ್ರಿಯೆಲ್ಲಿ 70ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದು, ಸಾಮಾಜಿಕ ಅಂತರ ಕೂಡಾ ಕಾಪಾಡಿಕೊಳ್ಳದಿರುವ ವಿಡಿಯೋಗಳು ಲಭ್ಯವಾಗಿವೆ.
ಸದ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಸತೀಶ್ ಕುಮಾರ್, ರೋಜಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅಲ್ಲದೆ, ಕಾನೂನು ಉಲ್ಲಂಘಿಸಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು, ಯಾವುದೇ ಕಾರಣಕ್ಕೂ ಕಾನೂನು ಉಲ್ಲಂಘನೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.