ETV Bharat / state

ಮಕ್ಕಳೊಂದಿಗೆ ಬಾವಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ತಾಯಿ : ಇಬ್ಬರು ಮಕ್ಕಳು ಸಾವು - A mother attempts to commit suicide with children

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ತಾಯಿಯೋರ್ವಳು ತನ್ನಿಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

Mother attempts to commit suicide with her children at Kalburgi
ಕಲಬುರಗಿಯಲ್ಲಿ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ
author img

By

Published : Jan 20, 2022, 9:02 PM IST

ಕಲಬುರಗಿ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಒಂದೂವರೆ ವರ್ಷದ ದಾಕ್ಷಾಯಿಣಿ ಮತ್ತು ಎರಡು ತಿಂಗಳ ಹಸುಗೂಸು ಸಾವನ್ನಪ್ಪಿದ್ದು, ತಾಯಿ ಭಾಗಮ್ಮಳನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಅಸ್ವಸ್ಥಗೊಂಡ ತಾಯಿ ಭಾಗಮ್ಮಳನ್ನು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚೇತರಿಸಿಕೊಂಡಿದ್ದಾಳೆ.

ಭಾಗಮ್ಮ ದೇಸಾಯಿ ಕಲ್ಲೂರು ಗ್ರಾಮದ ನಿವಾಸಿಯಾಗಿದ್ದು, ನಿನ್ನೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ಮುಚ್ಚಿಹಾಕಲು ನಿನ್ನೆಯೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಈ ಸಂಬಂಧ ದೇವಲಗಾಣಗಾಪುರ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದ್ದು, ಪೊಲೀಸರು ಭಾಗಮ್ಮಳನ ವಿಚಾರಣೆ ಮಾಡುತ್ತಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.