ETV Bharat / state

ಅಧಿಕಾರಿಗಳ ವಿರುದ್ಧ ಸಂಸದ ಉಮೇಶ್ ಜಾಧವ್ ಅಸಮಾಧಾನ - District Development meeting

ಸಂಸದ ಉಮೇಶ್ ಜಾಧವ್ ನೇತೃತ್ವದಲ್ಲಿ ಕಲಬುರಗಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು.

MP Umesh Jadhav held District Development meeting in kalaburagi
ಕಲಬುರಗಿ: ಸಂಸದ ಉಮೇಶ್ ಜಾಧವ್ ನೇತೃತ್ವದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಸಭೆ
author img

By

Published : Aug 13, 2020, 5:46 PM IST

ಕಲಬುರಗಿ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಸದ ಉಮೇಶ್ ಜಾಧವ್ ನೇತೃತ್ವದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು.

ಸಭೆ ಆರಂಭಗೊಳ್ಳುತ್ತಿದ್ದಂತೆಯೇ ಹಿಂದಿನ ಸಭೆಯ ಅನುಪಾಲನಾ ವರದಿಯ ಮಾಹಿತಿ ಪಡೆದ ಜಾಧವ್, ಕೆಲ ಅಧಿಕಾರಿಗಳ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದರು. ಬಿದ್ದಾಪುರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳದಿರುವುದಕ್ಕೆ ರೈಲ್ವೆ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಬಳಿಕ ಪಿಡಬ್ಲ್ಯುಡಿ ಮತ್ತು ರೈಲ್ವೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ತಾಕೀತು ಮಾಡಿದರು.

ಈರುಳ್ಳಿ ಸಂಗ್ರಹಗಾರಕ್ಕೆ ಬೇಡಿಕೆಯಿದ್ದರೂ ಸ್ಥಾಪನೆ ಮಾಡದಿರುವುದಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು, ಸರ್ಕಾರದ ಯೋಜನೆಗಳನ್ನು ರೈತರಿಗೆ ತಲುಪಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಸಭೆಗೆ ಗೈರಾದ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್​ಗೆ ನೋಟಿಸ್ ನೀಡುವಂತೆ ಡಿಸಿಗೆ ಸೂಚನೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.