ಕಲಬುರಗಿ: ರೈಲ್ವೆ ನಿಲ್ದಾಣದಲ್ಲಿ ವಿವಿಧ ಕಾಮಗಾರಿಗಳಿಗೆ ಸಂಸದ ಡಾ. ಉಮೇಶ್ ಜಾಧವ್ ಚಾಲನೆ ನೀಡಿದರು.
ರೈಲ್ವೆ ನಿಲ್ದಾಣದಲ್ಲಿ ಲಿಫ್ಟ್ ಕಾಮಗಾರಿ, ರೈಲ್ವೆ ಮೇಲ್ಸೇತುವೆ ಹಾಗೂ ಹೊಸ ಪ್ಲಾಟ್ ಫಾರ್ಮ್ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಜಾಧವ್, ಇತ್ತೀಚೆಗೆ ಪುಣೆಯಲ್ಲಿ ನಡೆದ ರೈಲ್ವೆ ಅಧಿಕಾರಿಗಳ ಸಭೆಯಲ್ಲಿ ಜಿಲ್ಲೆಯ ರೈಲ್ವೆ ನಿಲ್ದಾಣದ ಬೇಡಿಕೆಗಳ ಪಟ್ಟಿ ನೀಡಿ, ಅವುಗಳ ತುರ್ತು ಅವಶ್ಯಕತೆ ಕುರಿತು ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದರು.
ಜಿಲ್ಲೆಯಿಂದ ಬೆಂಗಳೂರಿಗೆ ಪ್ರತ್ಯೇಕ ರೈಲು ವ್ಯವಸ್ಥೆ, ಇತ್ಯಾದಿಗಳ ಕುರಿತು ಚರ್ಚಿಸಿದ್ದೇನೆ. ರೈಲ್ವೆ ವಿಭಾಗೀಯ ಕೇಂದ್ರ ಸ್ಥಾಪನೆ ಕುರಿತಾಗಿಯೂ ಮುಂದಿನ ದಿನಗಳಲ್ಲಿ ರೈಲ್ವೆ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.