ETV Bharat / state

ಕಲಬುರಗಿಯಲ್ಲಿ ವ್ಯಕ್ತಿಯನ್ನು ಅಪಹರಿಸಿ ಕೊಲೆ : ಇಬ್ಬರು ಆರೋಪಿಗಳ ಬಂಧನ, ಮತ್ತೋರ್ವ ಪರಾರಿ - ಕಲಬುರಗಿಯಲ್ಲಿ ವ್ಯಕ್ತಿಯ ಕೊಲೆ

ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ರೈಲ್ವೆ ಹಳಿ ಬಳಿ ಬಿಸಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು..

Kalburgi murder case
ಕಲಬುರಗಿಯಲ್ಲಿ ವ್ಯಕ್ತಿಯನ್ನು ಅಪಹರಿಸಿ ಕೊಲೆ
author img

By

Published : Jul 14, 2021, 4:36 PM IST

ಕಲಬುರಗಿ : ವ್ಯಕ್ತಿಯನ್ನು ಅಪಹರಿಸಿ, ಹತ್ಯೆಗೈದು ಶವವನ್ನು ರೈಲ್ವೆ ಹಳಿ ಮೇಲೆ ಬಿಸಾಡಿ ಹೋಗಿದ್ದ ಘಟನೆ ಜಿಲ್ಲೆಯ ಶಹಬಾದ್ ತಾಲೂಕಿನ ಮರ್ತೂರು ಬಳಿ ನಡೆದಿದೆ. ಚೆನ್ನಬಸಪ್ಪ ನಾಯ್ಕೋಡಿ(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮೃತ ಚೆನ್ನಬಸಪ್ಪ ಜೇವರ್ಗಿ ತಾಲೂಕಿನ ಬಿಲ್ಲಾಡ್ ಗ್ರಾಮದ ನಿವಾಸಿಯಾಗಿದ್ದು, ಕಳೆದ ಶನಿವಾರ ಗ್ರಾಮದಿಂದ ನಾಪತ್ತೆಯಾಗಿದ್ದನು. ಬಳಿಕ ಭಾನುವಾರ ಅವರ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದ್ದು, ಹಣದ ವಿಚಾರವಾಗಿ ಸ್ನೇಹಿತರೆ ಕೊಲೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು.

ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ರೈಲ್ವೆ ಹಳಿ ಬಳಿ ಬಿಸಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಪ್ರಕರಣ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಓದಿ: ಟೋಕಿಯೊ ಒಲಿಂಪಿಕ್ಸ್​: ಮೂಡಬಿದಿರೆ ಆಳ್ವಾಸ್‌ ಕಾಲೇಜಿನ ಇಬ್ಬರು ಕ್ರೀಡಾಪಟುಗಳು ಆಯ್ಕೆ

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.