ಕಲಬುರಗಿ: ವಿಧಾನ ಪರಿಷತ್ ಚುನಾವಣೆಯಲ್ಲಿ 'ಖರ್ಗೆ ದುಕಾನ್'(Kharge dukan) ಸಂಪೂರ್ಣ ಬಂದ್ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalinkumar Katil)ಹೇಳಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆನಗರದಲ್ಲಿಂದು ಆಯೋಜಿಸಿದ್ದ 'ಜನ ಸ್ವರಾಜ್' ಸಮಾವೇಶದಲ್ಲಿ (Jan swaraj) ಭಾಗವಹಿಸಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ(Mallikarjun Kharge) ವಿರುದ್ಧ ವಾಗ್ದಾಳಿ ನಡೆಸಿದರು. ಜನ ಸ್ವರಾಜ್ ಯಾತ್ರೆಗೆ ಜನರಿಂದ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಕಲಬುರಗಿಯ ಲೂಟಿ ಗ್ಯಾಂಗ್ ಖರ್ಗೆ ಅಂಗಡಿ ಬಂದ್ ಆಗಲಿದೆ. ಕಲಬುರಗಿಯ ಜನ ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಖರ್ಗೆಯನ್ನು ಸೋಲಿಸಿದ್ರಿ, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಣ್ಣ ಖರ್ಗೆಯನ್ನ ಸೋಲಿಸಿ ಊರು ಬಿಡಿಸಿದ್ರಿ. ಖರ್ಗೆ ಗ್ಯಾಂಗ್ಗೆ ಬುದ್ಧಿ ಕಲಿಸಿದ ಕಲಬುರಗಿ ಜನತೆಗೆ ಅಭಿನಂದನೆ ಎಂದಿದ್ದಾರೆ.
ಇದನ್ನೂ ಓದಿ:ಪರಿಷತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಘೋಷಣೆ : ಸತೀಶ್ ಜಾರಕಿಹೊಳಿ
ಕಾಂಗ್ರೆಸ್ನವರಿಗೆ ಹುಚ್ಚು ಹಿಡಿದಿದೆ:
ಇದೆ ವೇಳೆ ಮಾತನಾಡಿದ ಅವರು, ರಾಜ್ಯದ ರಕ್ಷಣೆ ಮಾಡಲು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra)ಹುಚ್ಚರಾಗಿ ಕೆಲಸ ಮಾಡ್ತಿದ್ದಾರೆ. ಆರಗ ಜ್ಞಾನೇಂದ್ರ ಕಾಲದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಹೀಗಾಗಿ ಕಾಂಗ್ರೆಸ್ ನವರಿಗೆ ಹುಚ್ಚು ಹಿಡಿದಿದೆ. ಆರಗ ಜ್ಞಾನೇಂದ್ರ ಅವರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದರು.