ETV Bharat / state

ಕಲಬುರಗಿಯಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಣೆ

ಕಲಬುರಗಿ ನಗರದ ಅರಣ್ಯ ಇಲಾಖೆಯ ಕಚೇರಿ ಸಂಕಿರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯ ಕಾರ್ಯವೈಖರಿಯನ್ನು ತಿಳಿ ಹೇಳಲಾಯಿತು.

National Forest Martyrs' Day
ಕಲಬುರಗಿಯಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ
author img

By

Published : Sep 11, 2020, 9:59 PM IST

ಕಲಬುರಗಿ : ಅರಣ್ಯ ಇಲಾಖೆಯ ಸಿಬ್ಬಂದಿ ಸಮಯಚಿತ್ತ ಹಾಗೂ ಅನ್ಯೋನ್ಯತೆಯಿಂದ ಕೆಲಸ ಮಾಡುವ ಮೂಲಕ ದೇಶದ ಅನರ್ಘ್ಯ ಸಂಪತ್ತಾದ ಅರಣ್ಯ ಸಂರಕ್ಷಣೆಯನ್ನು ಮಾಡಬೇಕು ಎಂದು ನಿವೃತ್ತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆರ್. ಆರ್.ಯಾಧವ್ ಕಿವಿಮಾತು ಹೇಳಿದರು.

ನಗರದ ಅರಣ್ಯ ಇಲಾಖೆಯ ಕಚೇರಿ ಸಂಕಿರಣದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಸೇವೆಯಲ್ಲಿದ್ದಾಗ ಇವರು ಅಗತ್ಯ ವಸ್ತು ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಕಾಡಿನಲ್ಲಿ ಪ್ರಯಾಣ ಮಾಡಬೇಕು. ಕಾಡು ಪ್ರಾಣಿಗಳ ದಾಳಿಗಳಿಂದ ರಕ್ಷಣೆ ಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು. ತಮ್ಮ ಜೀವದ ಜೊತೆಗೆ ಉಳಿದ ಅಧಿಕಾರಿ ಮತ್ತು ಸಿಬ್ಬಂದಿಯ ಜೀವ ರಕ್ಷಣೆ ಮಾಡುವ ಮೂಲಕ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿ. ಗೀತಾಂಜಲಿ, ತೊಂದರೆಗಳನ್ನು ಅರಿತು ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದಾಗ ಮಾತ್ರ ಮುಂದಾಗುವ ಅನಾಹುತಗಳನ್ನು ತಡೆಯಬಹುದು ಎಂದು ಸಿಬ್ಬಂದಿಗೆ ತಿಳಿ ಹೇಳಿದರು.

ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ. ಎನ್. ಚವ್ಹಾಣ್ , ಪ್ರಾದೇಶಿಕ ಅರಣ್ಯ ವಿಭಾಗದ ಪ್ರಭಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಾಬುರಾವ್ ಪಾಟೀಲ್ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿ ಗಣ್ಯರು ಹುತಾತ್ಮರ ಸ್ಮಾರಕಕ್ಕೆ ಪುಷ್ಪ ಗುಚ್ಚ ಸಮರ್ಪಣೆ ಮಾಡಿ ಗೌರವ ಸಲ್ಲಿಸಿದರು. ಹುತಾತ್ಮರ ಗೌರವ ಸೂಚಕವಾಗಿ ಪೊಲೀಸ್ ಸಿಬ್ಬಂದಿಯಿಂದ ಮೂರು ಸುತ್ತು ಗುಂಡು ಹಾರಿಸಲಾಯಿತಲ್ಲದೆ ಎರಡು ನಿಮಿಷ ಮೌನಾಚರಣೆ ಮಾಡಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.