ಕಲಬುರಗಿ : ನಗರದ ವೀರಮ್ಮ ಗಂಗಸಿರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನ ವಿನೂತನವಾಗಿ ಆಚರಿಸಲಾಯಿತು.
ಸಮಾರಂಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮಿಷನರ್ ಶಿವಲಿಂಗಮ್ಮ ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು. ರಾಷ್ಟ್ರೀಯ ಮತದಾನ ದಿನದ ಅಂಗವಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ತಮ್ಮ ಮತವನ್ನು ಯಾರಿಗೂ ಮಾರಿಕೊಳ್ಳೋದಿಲ್ಲ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುತ್ತೇವೆ. ಕಡ್ಡಾಯವಾಗಿ ಮತದಾನ ಮಾಡುತ್ತೇವೆ ಎಂಬಿತ್ಯಾದಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಇದನ್ನೂ ಓದಿ: ಜನ್ಮದಾತರ ನೆನಪಿಗಾಗಿ ಮೂರ್ತಿ ಪ್ರತಿಷ್ಠಾಪಿಸಿದ ಆಧುನಿಕ ಶ್ರವಣಕುಮಾರ...
ಈ ವೇಳೆ ಮತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳೂ ಸಹ ಮಾತನಾಡಿ ಮತದಾನದ ಅರ್ಹತೆ ಪಡೆದಿರೋ ನಾವೆಲ್ಲಾ ಮತಪಟ್ಟಿಯಲ್ಲಿ ಹೆಸರು ನೋಂದಾಯಿಸಿ, ತಮ್ಮ ಹಕ್ಕನ್ನು ಚಲಾಯಿಸಲು ಸಿದ್ಧರಾಗೋಣ ಎಂದರು. ಕಾಲೇಜಿನ ಪ್ರಾಚಾರ್ಯ ರಾಜೇಂದ್ರ ಕೊಂಡಾ ಮತ್ತಿತರರು ಉಪಸ್ಥಿತರಿದ್ದರು.