ETV Bharat / state

ಕಲಬುರಗಿ: ಪಿಎಫ್ಐ ಮುಖಂಡರ ಮನೆಗಳ ಮೇಲೆ ಎನ್ಐಎ ದಾಳಿ

ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ ಸಂಘಟನೆ ಜೊತೆ ಗುರುತಿಸಿಕೊಂಡಿದ್ದ ಕಲಬುರಗಿ ನಗರದ ಮುಖಂಡರ ಮನೆ ಮತ್ತು ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿದೆ.

nia raids
ಎನ್ಐಎ ದಾಳಿ
author img

By

Published : Dec 9, 2022, 2:18 PM IST

ಕಲಬುರಗಿ: ನಿಷೇಧಿತ ಪಿಎಫ್ಐ ಸಂಘಟನೆ ಜೊತೆ ಗುರುತಿಸಿಕೊಂಡಿದ್ದ ನಗರದ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗುರುವಾರ ನಗರದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ ಪೊಲೀಸರಿಗೂ ಮಾಹಿತಿ ಇಲ್ಲ. ದಾಳಿ ವೇಳೆ ಮಹತ್ವದ ದಾಖಲೆ ಕಲೆ ಹಾಕಿದ್ದಾರೆ ಎನ್ನಲಾಗಿದೆ. ಆದರೆ, ಯಾವೆಲ್ಲ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ತನಿಖೆ ಪ್ರಗತಿಯಲ್ಲಿದೆ ಎಂದು ಮಾತ್ರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪಿಎಫ್ಐನಿಂದ ಭಯೋತ್ಪಾದಕ ತರಬೇತಿ ಪ್ರಕರಣ: ಕರ್ನಾಟಕ, ಕೇರಳದಲ್ಲಿ ಎನ್ಐಎ ಶೋಧ

ಕಳೆದ ಬಾರಿ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಹಾಗೂ ಖಜಾಂಚಿ ಮನೆಗಳ ಮೇಲೆ ದಾಳಿ ನಡೆಸಿ, ಅವರನ್ನು ಬಂಧಿಸುವ ವೇಳೆ ಪೊಲೀಸರ ಸಹಾಯವನ್ನು ಎನ್ಐಎ ಅಧಿಕಾರಿಗಳು ಪಡೆದಿದ್ದರು. ಆದರೆ, ಈ ಬಾರಿ ಪೊಲೀಸರಿಗೂ ಯಾವುದೇ ಮಾಹಿತಿ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮೈಸೂರು ಸೇರಿ ರಾಜ್ಯದ ಹಲವೆಡೆ ನಿಷೇಧಿತ ಪಿಎಫ್ಐ ಮುಖಂಡರ ಮನೆ ಮೇಲೆ ಎನ್ಐಎ ದಾಳಿ

ಕಳೆದ ಸೆ.22 ರಂದು ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು, ಪಿಎಫ್‌ಐ ಜಿಲ್ಲಾಧ್ಯಕ್ಷ ಏಜಾಜ್ ಅಲಿ ಮತ್ತು ಖಂಜಾಂಚಿ ಶಾಹಿದ್ ನಾಶೀರ್ ಮನೆ ಹಾಗೂ ಕಚೇರಿಯಲ್ಲಿ ಶೋಧ ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.