ಕಲಬುರಗಿ: ಲಾಕ್ಡೌನ್ ಇದ್ದರೂ ಅನವಶ್ಯಕವಾಗಿ ಮನೆಯಿಂದ ರಸ್ತೆಗೆ ಇಳಿಯುವ ವಾಹನಗಳಿಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಸಖತ್ ಪ್ಲಾನ್ ರೂಪಿಸಿದೆ.
ಇಂದು ರಾತ್ರಿಯಿಂದಲೇ ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್ಗಳಲ್ಲಿ ಸಾರ್ವಜನಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಅನಗತ್ಯವಾಗಿ ರಸ್ತೆಗೆ ಇಳಿಯುತ್ತಿರುವ ವಾಹನ ಸವಾರರನ್ನು ತಡೆಯುವ ದೃಷ್ಟಿಯಿಂದ ಈ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಇಂದಿನಿಂದ ಮುಂದಿನ ಆದೇಶದವರೆಗೂ ಜಿಲ್ಲೆಯಾದ್ಯಂತ ಪೆಟ್ರೋಲ್, ಡೀಸೆಲ್ ಮಾರಾಟಕ್ಕೆ ನಿಷೇಧವಿದೆ ಎಂದು ಜಿಲ್ಲಾಧಿಕಾರಿ ಬಿ. ಶರತ್ ತಿಳಿಸಿದ್ದಾರೆ.