ಕಲಬುರಗಿ: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆ ಚಟುವಟಿಕೆಗಳು ಚುರಕುಗೊಂಡಿದ್ದು, ಇಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಕಲಬುರಗಿ ನಗರದ ಮಿನಿ ವಿಧಾನಸೌಧದಲ್ಲಿ ಆರ್ಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಎನ್.ವಿ.ಪ್ರಸಾದ್ರಿಗೆ ಎರಡೂ ಪಕ್ಷದ ಅಭ್ಯರ್ಥಿಗಳು ಆಯಾ ಪಕ್ಷದ ಪ್ರಮುಖರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿಯಾಗಿ ಶಶೀಲ್ ನಮೋಶಿ ನಾಮಪತ್ರ ಸಲ್ಲಿಕೆ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ಸೇರಿದಂತೆ ಮತ್ತಿತರು ಉಪಸ್ಥಿತಿ ಇದ್ದರು.
ಕಾಂಗ್ರೆಸ್ ಅಭ್ಯರ್ಥಿ ಮಟ್ಟೂರ್ ನಾಮಪತ್ರ ಸಲ್ಲಕೆ...
ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ್ ನಾಮಪತ್ರ ಸಲ್ಲಿಸಿದರು. ಮಟ್ಟೂರ್ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಉಪಸ್ಥಿತರಿದ್ದರು.