ಕಲಬುರಗಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 41 ಟನ್ ಅಕ್ಕಿ ಜಪ್ತಿ ಮಾಡಿಕೊಂಡಿದ್ದಾರೆ.
ಆಳಂದ ತಾಲೂಕಿನ ಖಜೂರಿ ಚೆಕ್ ಪೋಸ್ಟ್ ಬಳಿ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿಯನ್ನು ರಾಯಚೂರಿನಿಂದ ಗುಜರಾತ್ ಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಅಧಿಕಾರಿಗಳು ದಾಳಿ ನಡೆಸಿ ಲಾರಿ ಚಾಲಕ ಖಾಜಿ ಸಾಬ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.