ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ರೋಗಿ ಸಂಖ್ಯೆ 205 ಆಗಿದ್ದ 55 ವರ್ಷದ ವ್ಯಕ್ತಿ ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೆಂದು ಜಿಲ್ಲಾಧಿಕಾರಿ ಬಿ.ಶರತ್ ಖಚಿತಪಡಿಸಿದ್ದಾರೆ.
ಮೃತ ವ್ಯಕ್ತಿ ಮೋಮಿನಪುರ ಬಡಾವಣೆ ನಿವಾಸಿಯಾಗಿದ್ದು, ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಇಎಸ್ಐ ಆಸ್ಪತ್ರೆಯಲ್ಲಿ ವೆಂಟಿಲೇಷನ್ ಅಳವಡಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸಚಿವ ಶ್ರೀರಾಮುಲು ಸಹ ಟ್ವೀಟ್ ಮಾಡಿದ್ದು, ವ್ಯಕ್ತಿ ಕೊರೊನಾದಿಂದಲೇ ಮೃತಪಟ್ಟಿದ್ದಾನೆ ಅಂತ ಮಾಹಿತಿ ನೀಡಿದ್ದಾರೆ.
-
ನಿನ್ನೆ ರಾತ್ರಿ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ದಾಖಲಾದ 65 ವರ್ಷದ ವ್ಯಕ್ತಿಯೊಬ್ಬರು ಇಂದು ಮೃತರಾಗಿದ್ದಾರೆ. ಇವರು ಹೃದ್ರೋಗದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಇವರನ್ನು ಪ್ರತ್ಯೇಕ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ, #Covid19 ಪರೀಕ್ಷೆ ಮಾಡಲಾಗಿ, ವರದಿಯಲ್ಲಿ ಸೋಂಕು ದೃಢಪಟ್ಟಿದೆ.
— B Sriramulu (@sriramulubjp) April 13, 2020 " class="align-text-top noRightClick twitterSection" data="
">ನಿನ್ನೆ ರಾತ್ರಿ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ದಾಖಲಾದ 65 ವರ್ಷದ ವ್ಯಕ್ತಿಯೊಬ್ಬರು ಇಂದು ಮೃತರಾಗಿದ್ದಾರೆ. ಇವರು ಹೃದ್ರೋಗದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಇವರನ್ನು ಪ್ರತ್ಯೇಕ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ, #Covid19 ಪರೀಕ್ಷೆ ಮಾಡಲಾಗಿ, ವರದಿಯಲ್ಲಿ ಸೋಂಕು ದೃಢಪಟ್ಟಿದೆ.
— B Sriramulu (@sriramulubjp) April 13, 2020ನಿನ್ನೆ ರಾತ್ರಿ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ದಾಖಲಾದ 65 ವರ್ಷದ ವ್ಯಕ್ತಿಯೊಬ್ಬರು ಇಂದು ಮೃತರಾಗಿದ್ದಾರೆ. ಇವರು ಹೃದ್ರೋಗದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಇವರನ್ನು ಪ್ರತ್ಯೇಕ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ, #Covid19 ಪರೀಕ್ಷೆ ಮಾಡಲಾಗಿ, ವರದಿಯಲ್ಲಿ ಸೋಂಕು ದೃಢಪಟ್ಟಿದೆ.
— B Sriramulu (@sriramulubjp) April 13, 2020
ದೆಹಲಿ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿ ಮರಳಿದ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ ಕಾರಣ ಸೋಂಕು ತಗುಲಿತ್ತು. ಆದ್ರೆ ಗಮನಾರ್ಹ ವಿಷಯ ಅಂದ್ರೆ ಸಭೆಯಲ್ಲಿ ಭಾಗಿಯಾಗಿ ಬಂದವನಿಗೆ ನೆಗೆಟಿವ್ ಇದೆ. ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿಗೆ ಮಾತ್ರ ಪಾಸಿಟಿವ್ ಇತ್ತು. ಸದ್ಯ ಮೃತ ವ್ಯಕ್ತಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ. ಏಪ್ರಿಲ್ 9ಕ್ಕೆ ಇಎಸ್ಐ ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಫಲಿಸದೆ ಇಂದು ಸಂಜೆ ಸಾವನ್ನಪ್ಪಿದ್ದಾನೆ.