ಕಲಬುರಗಿ: ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ.
ದೆಹಲಿಯ ನಿಜಾಮುದ್ದಿನ್‌ಗೆ ಹೋಗಿ ಬಂದಿದ್ದ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ 55 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಯನ್ನು ಈಗಾಗಲೇ ಇಎಸ್ಐ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಇಲ್ಲಿವರೆಗೆ ಪತ್ತೆಯಾದ ಪಾಸಿಟಿವ್ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.