ಕಲಬುರಗಿ: ರಾಜ್ಯ ರಾಜಕಾರಣಿಗಳ ಗುದ್ದಾಟದಿಂದ ಬೆಸತ್ತ ಜನ ರಾಷ್ಟ್ರಪತಿ ಆಡಳಿತ ಹೇರುವಂತೆ ಆಗ್ರಹಿಸುತ್ತಿದ್ದಾರೆ.
ನಗರದಲ್ಲಿ ಕನ್ನಡ ಜಾಗೃತಿ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ರಾಷ್ಟ್ರಪತಿ ಆಡಳಿತ ಜಾರಿಗೆ ಒತ್ತಾಯಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಅಧಿಕಾರದ ದುರಾಸೆಯಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಂದ ಜನ ಬೆಸತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿವೆ.
ಜನಪ್ರತಿನಿಧಿಗಳು ಅಧಿಕಾರದ ದುರಾಸೆಗೆ ಕಿತ್ತಾಟ, ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರಪತಿ ಆಡಳಿತ ಹೇರುವ ಮೂಲಕ ರಾಜಕಾರಣಿಗಳ ಗುದ್ದಾಟಕ್ಕೆ ಬ್ರೇಕ್ ಹಾಕುವಂತೆ ಆಗ್ರಹಿಸಿದರು.