ಕಲಬುರಗಿ:ನಿರಾಶ್ರಿತ ಬಡ ಜನರಿಗೆ ಮನೆ ಕಲ್ಪಿಸುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಸ್.ಯು.ಸಿ.ಐ. ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಏಕತಾ ಕಾಲೊನಿ ನಿರಾಶ್ರಿತರಿಗೆ ಸ್ವಂತ ಮನೆ ನಿರ್ಮಿಸಿಕೊಡಬೇಕು, ಹಾಗೂ ನಗರದ ವಿವಿಧೆಡೆ ಇರುವ ನಿರಾಶ್ರಿತರಿಗೆ ಮನೆ ಕಲ್ಪಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.