ಕಲಬುರಗಿ: ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘನೆ ಮಾಡುವವರನ್ನು, ರೌಡಿ ಶೀಟರ್ ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಕಲಬುರಗಿಯಲ್ಲಿ ಇದುವರೆಗೆ ಕೊರೊನಾ ಲಾಕ್‌ಡೌನ್ ನಿಯಮ ಉಲ್ಲಂಘಿಸಿದ, 118 ಜನರನ್ನು ರೌಡಿ ಶೀಟರ್ ಪಟ್ಟಿಗೆ ಜಿಲ್ಲಾ ಪೊಲೀಸ್ ಇಲಾಖೆ ಸೇರಿಸಿದೆ.
ಅಲ್ಲದೇ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಇಲ್ಲಿವರೆಗೆ 38 ಲಾಕ್‌ಡೌನ್ ಉಲ್ಲಂಘನೆ ಪ್ರಕರಣ ದಾಖಲಾಗಿವೆ. ಇದಕ್ಕೆ ಸಂಬಂಧಿಸಿದ 122 ಜನರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
ಲಾಕ್‌ಡೌನ್ ಉಲ್ಲಂಘಿಸಿ ಅನಗತ್ಯವಾಗಿ ರಸ್ತೆಗೆ ಇಳಿದಿದ್ದ 659 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೇ 92,700 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.