ETV Bharat / state

ಕಲಬುರಗಿಯಲ್ಲಿ ಕೊರೊನಾ ವೈರಸ್​​ಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 5 ಕ್ಕೆ ಏರಿಕೆ

author img

By

Published : Apr 27, 2020, 7:35 PM IST

ಕಲಬುರಗಿಯ ಆಳಂದ ಪಟ್ಟಣ 57 ವರ್ಷದ ವ್ಯಕ್ತಿಯು ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.

corona updates in kalaburagi
ಕಲಬುರಗಿಯಲ್ಲಿ ಕೊರೊನಾ ವೈರಸ್​​ಗೆ ಮತ್ತೊಂದು ಬಲಿ

ಕಲಬುರಗಿ: ಕೊರೊನಾ ವೈರಸ್ ಜಿಲ್ಲೆಯಲ್ಲಿ​​​​ ಮತ್ತೊಬ್ಬ ವ್ಯಕ್ತಿಯನ್ನು ಬಲಿ ಪಡೆದಿದ್ದು, ಆಳಂದ ಪಟ್ಟಣ ನಿವಾಸಿಯಾದ 57 ವರ್ಷದ ವ್ಯಕ್ತಿಯು ಕೊರೊನಾ ವೈರಸ್​ನಿಂದ ಮೃತಪಟ್ಟಿದ್ದಾನೆ.

ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್​ ಟ್ವೀಟ್ ಮಾಡಿದ್ದಾರೆ.

ಮೃತ ವ್ಯಕ್ತಿಗೆ ಏಪ್ರಿಲ್ 21ರಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಸಚಿವರು ಟ್ವೀಟ್​ ಮಾಡಿದ್ದಾರೆ.

  • ರಾಜ್ಯದಲ್ಲಿ ಕೋವಿಡ್ 19 ಸೋಂಕಿತ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. 57ವರ್ಷದ ಅಳಂದದ ನಿವಾಸಿಯಾಗಿದ್ದ ಇವರಲ್ಲಿ ಏಪ್ರಿಲ್ 21ರಂದು ಕೊರೋನಾ ಪಾಸಿಟಿವ್ ಬಂದಿತ್ತು. ಉಸಿರಾಟದ ತೊಂದರೆಯಿಂದ GIMSಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇದರೊಂದಿಗೆ ಕಲ್ಬುರ್ಗಿ ಜಿಲ್ಲೆಯಲ್ಲಿ ಒಟ್ಟು 5 ಕೋವಿಡ್ ಮರಣ ಸಂಭವಿಸಿದಂತಾಗಿದೆ

    — Dr Sudhakar K (@mla_sudhakar) April 27, 2020 " class="align-text-top noRightClick twitterSection" data=" ">

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.